ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣ ಅವಕಾಶ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಉನ್ನತ ಮಟ್ಟದ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
BMRCL Recruitment 2026
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಯಲ್ಲಿ ಸಂಪೂರ್ಣ ಮಾಹಿತಿಯನ್ನು ನೋಡಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15-01-2026 ಕೊನೆಯ ದಿನಾಂಕವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಹತಾ ಮಾನದಂಡ, ಹುದ್ದೆಯ ವಿವರ, ಪ್ರಮುಖ ದಾಖಲೆಗಳು ಹಾಗೂ ಇನ್ನಿತರೆ ಮಾಹಿತಿಗಳ ಬಗ್ಗೆ ಸಂಪೂರ್ಣವಾಗಿ ಕೆಳಗೆ ನೀಡಿರುತ್ತೇವೆ ಅದನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳ ಅವಲೋಕನ: (BMRCL Recruitment 2026)
| ಸಂಸ್ಥೆಯ ಹೆಸರು | ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ |
| ಹುದ್ದೆಯ ಹೆಸರು | ಜನರಲ್ ಮ್ಯಾನೇಜರ್ ಮತ್ತು ಡೆಪ್ಯೂಟಿ ಜನರಲ್ ಮ್ಯಾನೇಜರ್ |
| ಹುದ್ದೆಯ ಸಂಖ್ಯೆ | 07 |
| ಉದ್ಯೋಗ ಸ್ಥಳ | ಬೆಂಗಳೂರು – ಕರ್ನಾಟಕ |
| ಅಧಿಸೂಚನೆ ಹೊರಡಿಸಿದ ದಿನಾಂಕ | 20-12-2025 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-01-2026 |
ಸಂಕ್ಷಿಪ್ತ ಮಾಹಿತಿ:
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಹರಾಗಿರುತ್ತಾರೆ.

ಹುದ್ದೆಗಳ ವಿವರ:
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
| ಜನರಲ್ ಮ್ಯಾನೇಜರ್ (ಸಿಗ್ನಲಿಂಗ್/ ಟೆಲಿಕಾಂ) | 01 ಹುದ್ದೆ |
| ಜನರಲ್ ಮ್ಯಾನೇಜರ್ (ಆಪರೇಷನ್ಸ್) | 01 ಹುದ್ದೆ |
| ಡೆಪ್ಯುಟಿ ಜನರಲ್ ಮ್ಯಾನೇಜರ್ (ಸೇಫ್ಟಿ) | 01 ಹುದ್ದೆ |
| ಡೆಪ್ಯುಟಿ ಜನರಲ್ ಮ್ಯಾನೇಜರ್ (SSM) | 01 ಹುದ್ದೆ |
| ಡೆಪ್ಯುಟಿ ಜನರಲ್ ಮ್ಯಾನೇಜರ್ (AFC/ಟೆಲಿ) | 01 ಹುದ್ದೆ |
| ಡೆಪ್ಯುಟಿ ಜನರಲ್ ಮ್ಯಾನೇಜರ್ (ಸ್ಟೋರ್ಸ್) | 01 ಹುದ್ದೆ |
| ಡೆಪ್ಯುಟಿ ಜನರಲ್ ಮ್ಯಾನೇಜರ್ (P-Way) | 01 ಹುದ್ದೆ |
ಶೈಕ್ಷಣಿಕ ಅರ್ಹತೆ:
- ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಇಲೆಕ್ಟ್ರಾನಿಕ್ಸ್, ಕಮ್ಯುನಿಕೇಷನ್, ಎಲೆಕ್ಟ್ರಿಕಲ್ಸ್ ಅಥವಾ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಹೊಂದಿರಬೇಕು ಜೊತೆಗೆ ಕನಿಷ್ಠ 20 ವರ್ಷ ವೃತ್ತಿ ಅನುಭವವನ್ನು ಹೊಂದಿರಬೇಕು.
- ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಸಿವಿಲ್, ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಹೊಂದಿರಬೇಕು ಜೊತೆಗೆ 14 ವರ್ಷ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
- ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ (ಗುತ್ತಿಗೆ ಆಧಾರಿತ) ಗರಿಷ್ಠ 48 ವರ್ಷಗಳು
- ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ 55 ವರ್ಷಗಳು
- ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ (ನಿಯೋಜನೆ ಆಧಾರ) ಗರಿಷ್ಠ 56 ವರ್ಷಗಳು
ವಯೋಮಿತಿ ಸಡಿಲಿಕೆ:
ಅರ್ಹ ಅಭ್ಯರ್ಥಿಗಳ ಲಭ್ಯತೆ ಮೇಲೆ ಹಾಗೂ ಸಂಸ್ಥೆಯ ಅಗತ್ಯಕ್ಕೆ ಅನುಗುಣವಾಗಿ ಸಕ್ಷಮ ಪ್ರಾಧಿಕಾರದ ಅನುಮೋದನೆಯೊಂದಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ನೇಮಕಾತಿ ಅಧಿಸೂಚನೆಯಲ್ಲಿ ಅರ್ಜಿ ಶುಲ್ಕವನ್ನು ಉಲ್ಲೇಖಿಸಿಲ್ಲ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
ವೇತನ ಶ್ರೇಣಿ:
| ಹುದ್ದೆಯ ಹೆಸರು | ವೇತನ ಶ್ರೇಣಿ |
| ಜನರಲ್ ಮ್ಯಾನೇಜರ್ | 2,06,250 |
| ಡೆಪ್ಯುಟಿ ಜನರಲ್ ಮ್ಯಾನೇಜರ್ | 1,64,000 |
ಅಗತ್ಯ ದಾಖಲೆಗಳು:
- ಶೈಕ್ಷಣಿಕ ಪ್ರಮಾಣಪತ್ರ
- ಅಂಕಪಟ್ಟಿ
- ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ಓಟರ್ ಐಡಿ
- ಇತರೆ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- BMRCL ಅಧಿಕೃತ ವೆಬ್ ಸೈಟ್ https://www.bmrc.co.in/ ಗೆ ಭೇಟಿ ನೀಡಿ
- BMRCL ನೇಮಕಾತಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ, ಸೂಚಿಸಿದ ಅರ್ಜಿ ನಮೂನೆಯನ್ನು ಭರ್ತಿಮಾಡಿ
- ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿಮಾಡಿರುವ ಬಗ್ಗೆ ಖಚಿತಪಡಿಸಿಕೊಳ್ಳಿ
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಅರ್ಜಿಯನ್ನು ಪ್ರಿಂಟ್ ತೆಗೆದುಕೊಳ್ಳಿ.
- ನಂತರ ಅರ್ಜಿ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ BMRCL ಕಚೇರಿಗೆ ಕಳುಹಿಸಿ.
ಪ್ರಮುಖ ದಿನಾಂಕಗಳು:
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-12-2025
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-01-2026
- ಅರ್ಜಿ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 20-01-2026
ಆಯ್ಕೆ ಪ್ರಕ್ರಿಯೆ:
- ಮೊದಲು ಅರ್ಜಿಯನ್ನು ಪರಿಶೀಲಿಸಿ ಶಾರ್ಟ್ ಲಿಸ್ಟ್ ಮಾಡಲಾಗುವುದು.
- ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
- ಕನ್ನಡ ಭಾಷಾ ಜ್ಞಾನವಿರುವ ಅಭ್ಯರ್ಥಿಗಳಿಗೆ ಆಯ್ಕೆಯಲ್ಲಿ ಮೊದಲ ಆದ್ಯತೆ ನೀಡಲಾಗುವುದು.
ಪ್ರಮುಖ ಲಿಂಕ್ ಗಳು:
| ಅಧಿಸೂಚನೆಯ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ತೀರ್ಮಾನ:
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಭವ ಹೊಂದಿರುವವರಿಗೆ ಇದೊಂದು ಸುವರ್ಣ ಅವಕಾಶ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 15-01-2026 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ನಂತರ ಅರ್ಜಿ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ BMRCL ಕಚೇರಿಗೆ ಕಳುಹಿಸಿ.





