ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ವಿದ್ಯಾಸಿರಿ ವಿದ್ಯಾರ್ಥಿ ವೇತನ 2026 । Vidyasiri Scholarship 2026

On: Tuesday, January 6, 2026 2:00 PM
vidyasiri scholarship kannada

ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿದ್ಯಾಸಿರಿ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡಿದ್ದು, ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕಾ? ಹಾಗಿದ್ದರೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Vidyasiri Scholarship 2026 In Kannada

ಈಗಿನ ಕಾಲದಲ್ಲಿ ಶಿಕ್ಷಣ ಪಡೆದುಕೊಳ್ಳುವುದು ಪ್ರತಿಯೊಬ್ಬರಿಗೂ ಬಹಳ ಮುಖ್ಯ. ಶಿಕ್ಷಣ ಕೇವಲ ಪುಸ್ತಕ ಜ್ಞಾನಕ್ಕೆ ಸೀಮಿತವಲ್ಲದೆ, ಒಬ್ಬ ವ್ಯಕ್ತಿ ಸ್ವಾವಲಂಬಿಯಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರಿಗೂ ಉನ್ನತ ಶಿಕ್ಷಣ ಪಡೆದುಕೊಳ್ಳಬೇಕೆಂಬ ಮಹದಾಸೆ ಇರುತ್ತದೆ ಆದರೆ ಆರ್ಥಿಕ ಸಮಸ್ಯೆಯಿಂದಾಗಿ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುತ್ತಾರೆ. ಈ ಒಂದು ಸಮಸ್ಯೆಯನ್ನು ನಿವಾರಿಸಿ ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತಮ ಮತ್ತು ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಪ್ರೇರೇಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಜಾರಿಗೆ ತಂದಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಉನ್ನತ ಶಿಕ್ಷಣವನ್ನು ಪಡೆದುಕೊಂಡು ನಿಮ್ಮ ಜೀವನವನ್ನು ರೂಪಿಸಿಕೊಳ್ಳಿ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕಾದರೆ, ಹೇಗೆ ಅರ್ಜಿ ಸಲ್ಲಿಸಬೇಕು? ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು? ಅರ್ಹತಾ ಮಾನದಂಡಗಳೇನು? ಎನ್ನುವ ಬಗ್ಗೆ ಗೊಂದಲಗಳಿದ್ದರೆ ಈ ಒಂದು ಲೇಖನವು ನಿಮ್ಮ ಎಲ್ಲಾ ಗೊಂದಲಗಳಿಗೂ ಸಂಪೂರ್ಣ ಸ್ಪಷ್ಟತೆ ನೀಡುತ್ತದೆ.

ವಿದ್ಯಾರ್ಥಿ ವೇತನದ ಅವಲೋಕನ: (Vidyasiri Scholarship 2026 In Kannada)

ವಿದ್ಯಾರ್ಥಿ ವೇತನದ ಹೆಸರುವಿದ್ಯಾಸಿರಿ ವಿದ್ಯಾರ್ಥಿವೇತನ
ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಅರ್ಹ ಫಲಾನುಭವಿಗಳುಹತ್ತನೇ ತರಗತಿಯನ್ನು ಉತ್ತೀರ್ಣರಾದ ಹಿಂದುಳಿದ ವರ್ಗದ ವಿದ್ಯಾರ್ಥಿಗಳು
ಒಟ್ಟು ಪ್ರೋತ್ಸಾಹಧನಮಾಸಿಕ ರೂ. 1,500
ಅರ್ಜಿಸಲ್ಲಿಸುವ ರಾಜ್ಯಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್
Vidyasiri Scholarship 2026 In Kannada

ಸಂಕ್ಷಿಪ್ತ ಮಾಹಿತಿ :- Vidyasiri Scholarship 2026

ಹಿಂದುಳಿದ ವರ್ಗಗಳ ವಿದ್ಯಾಥಿಗಳು ಉನ್ನತ ಶಿಕ್ಷಣ ಪಡೆಯುದನ್ನು ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿದ್ಯಾಸಿರಿ ವಿದ್ಯಾಥಿವೇತನವನ್ನು ಬಿಡುಗಡೆ ಮಾಡಿದ್ದು, ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ ಹಾಗೂ ವಿಕಲಚೇತನ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಆಹಾರ ಮತ್ತು ವಸತಿ ಸೌಲಭ್ಯಕ್ಕಾಗಿ ಸಹಾಯಧನವನ್ನು ನೀಡಲು ಕರ್ನಾಟಕ ಸರ್ಕಾರವು ವಿದ್ಯಾಸಿರಿ ವಿದ್ಯಾರ್ಥಿ ವೇತನದಡಿಯಲ್ಲಿ ಆಯ್ಕೆ ಗೊಂಡ ವಿದ್ಯಾರ್ಥಿಗಳಿಗೆ ತಿಂಗಳಿಗೆ ರೂ. 1,500 ರಂತೆ ಒಂದು ಶೈಕ್ಷಣಿಕ ವರ್ಷಕ್ಕೆ ರೂ.15,000 ವರೆಗೆ ವಿದ್ಯಾರ್ಥಿವೇತನವನ್ನು ನೀಡುತ್ತದೆ.

” ವಿದ್ಯಾರ್ಥಿಯು ಹಿಂದುಳಿದ ವರ್ಗಕ್ಕೆ ಸೇರಿದ್ದು, ಸರ್ಕಾರದ ಯಾವುದೇ ಅನುದಾನಿತ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ಪ್ರವೇಶ ಪಡೆಯದ ಹಾಗೂ ಮೆಟ್ರಿಕ್ ನಂತರದ ಕೋರ್ಸ್ ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನವನ್ನು ಅರ್ಹರಾಗಿರುತ್ತಾರೆ.”

ವಿದ್ಯಾರ್ಥಿವೇತನ ಉದ್ದೇಶ:- Vidyasiri Scholarship 2026 In Kannada

  • ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯವಾಗುತ್ತದೆ.
  • ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳು ಸಮಾನ ಶಿಕ್ಷಣ ಒದಗಿಸುವುದು.
  • ಆರ್ಥಿಕ ಸಮಸ್ಯೆಯಿಂದ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುವುದನ್ನು ತಡೆಗಟ್ಟುವುದು.
  • ಶಿಕ್ಷಣದ ಮೂಲಕ ವಿದ್ಯಾರ್ಥಿಗಳು ಸ್ವಾವಲಂಬಿ ಜೀವನವನ್ನು ನಡೆಸಲು ಸಹಾಯವಾಗುತ್ತದೆ.
  • ಸಮಾಜದಲ್ಲಿ ಸಮಾನ ಶಿಕ್ಷಣವನ್ನು ಒದಗಿಸುವ ಮೂಲಕ ಶೈಕ್ಷಣಿಕ ಅಸಮಾನತೆಯನ್ನು ತಡೆಯಬಹುದು.
  • ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಮೂಲಕ ಆಹಾರ ಮತ್ತು ವಸತಿ ಸೌಲಭ್ಯವನ್ನು ಒದಗಿಸುವುದು.

ಯೋಜನೆಯ ಪ್ರಯೋಜನ:

  • ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಬೆಂಬಲ ದೊರೆಯುತ್ತದೆ.
  • ವಿದ್ಯಾಸಿರಿ ವಿದ್ಯಾರ್ಥಿ ವೇತನದಿಂದ ವಿದ್ಯಾರ್ಥಿಗಳಿಗೆ ಸಹಾಯಧನವನ್ನು ನೀಡುವ ಮೂಲಕ ಮೆಟ್ರಿಕ್ ನಂತರದ ಕೋರ್ಸ್ ನಲ್ಲಿ ಕಲಿಯುವ ವಿದ್ಯಾರ್ಥಿಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು.
  • ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸಿ ಅವರ ಶೈಕ್ಷಣಿಕ ಸಾಧನೆಯನ್ನು ಹೆಚ್ಚಿಸುತ್ತದೆ.
  • ವಿದ್ಯಾರ್ಥಿಗಳು ಒಂದು ಶೈಕ್ಷಣಿಕ ವರ್ಷದಲ್ಲಿ ರೂ. 15,000 ವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು.
  • ವಿದ್ಯಾರ್ಥಿಗಳು ಯಾವುದೇ ಆರ್ಥಿಕ ಚಿಂತೆಗಳಿಲ್ಲದೆ ವಿದ್ಯಾಭ್ಯಾಸದ ಮೇಲೆ ಹೆಚ್ಚಿನ ಗಮನ ಹರಿಸಲು ಸಹಾಯಕಾರಿಯಾಗಿದೆ.
  • ಯಾವುದೇ ಮಧ್ಯವರ್ತಿಗಳ ಸಹಾಯವಿಲ್ಲದೆ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ

ಅರ್ಹತಾ ಮಾನದಂಡ:

  • ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ವಿದ್ಯಾರ್ಥಿಗಳು ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು.
  • ವಿದ್ಯಾರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಗಳನ್ನು ಓದುತ್ತಿರಬೇಕು.
  • ಯಾವುದೇ ಸರ್ಕಾರಿ ಅನುದಾನಿತ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿರಬಾರದು.
  • ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಈ ಕೆಳಕಂಡ ಮಿತಿಯಲ್ಲಿರಬೇಕು.
ವರ್ಗವಾರ್ಷಿಕ ಆದಾಯ
ಪ್ರವರ್ಗ -I ರೂ. 2.50 ಲಕ್ಷ
ಪ್ರವರ್ಗ- 2Aರೂ. 1 ಲಕ್ಷ
ಪ್ರವರ್ಗ-3A ರೂ. 1 ಲಕ್ಷ
ಪ್ರವರ್ಗ -3Bರೂ. 1 ಲಕ್ಷ
Vidyasiri Scholarship 2026 In Kannada
  • ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಹಾಜರಾತಿ 75% ಇರಬೇಕು.
  • ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಈ ಕೆಳಕಂಡಂತೆ ಅಂಕವನ್ನು ಗಳಿಸಿ ಉತ್ತೀರ್ಣರಾಗಿರಬೇಕು
ವರ್ಗಒಟ್ಟು ಅಂಕಗಳು
ಪ್ರವರ್ಗ -I40% – 50%
ಪ್ರವರ್ಗ- 2A50% – 60%
ಪ್ರವರ್ಗ-3A50% – 60%
ಪ್ರವರ್ಗ -3B50% – 60%
  • ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿದ್ದು, ಅವರು ವಾಸಿಸುವ ಮನೆಯು ಮಾವರು ಓದುತ್ತಿರುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ. ದೂರದಲ್ಲಿರಬೇಕು.
“ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ, ಆದರೆ ಇದು ಹೆಣ್ಣು ಮಕ್ಕಳಿಗೆ ಅನ್ವಹಿಸುವುದಿಲ್ಲ”

ಯಾರು ಅರ್ಹರಲ್ಲ? Vidyasiri Scholarship 2026 In Kannada

  • ವಿದ್ಯಾರ್ಥಿಗಳು ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸ್ ಅನ್ನು ಬದಲಿಸಿದರೆ ಆ ವಿದ್ಯಾರ್ಥಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಲ್ಲ.
  • ಸಮಾನ ಕೋರ್ಸ್ ನಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡಿದರೆ ಆ ವಿದ್ಯಾರ್ಥಿ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಲ್ಲ.
Vidyasiri Scholarship 2026 In Kannada
Vidyasiri Scholarship 2026 In Kannada

ಅಗತ್ಯ ದಾಖಲೆಗಳು: Vidyasiri Scholarship 2026 In Kannada

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಕೆಳಗಿನ ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.

  • ಆದಾಯ ಪ್ರಮಾಣಪತ್ರ 
  • ಜಾತಿ ಪ್ರಮಾಣಪತ್ರ
  • ಆಧಾರ್ ಕಾರ್ಡ್
  • ಭಾವಚಿತ್ರ 
  • ಬ್ಯಾಂಕ್ ಖಾತೆಯ ವಿವರ
  • ಮೊಬೈಲ್ ಸಂಖ್ಯೆ
  • ವರ್ಗಾವಣಾ ಪ್ರಮಾಣಪತ್ರ

ಅರ್ಜಿ ಸಲ್ಲಿಸುವ ವಿಧಾನ: Vidyasiri Scholarship 2026 In Kannada

ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು.

  • ಅಧಿಕೃತ ವೆಬ್ ಸೈಟ್ https://bcwd.karnataka.gov.in/ ಗೆ ಭೇಟಿ ನೀಡಿ
  • ವಿದ್ಯಾಸಿರಿ ವಿದ್ಯಾರ್ಥಿವೇತನ ಆಪ್ಷನ್ ಅನ್ನು ಕ್ಲಿಕ್ ಮಾಡಿ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ.
  • ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಭರ್ತಿಮಾಡಿ ಸಬ್ಮಿಟ್ ಮಾಡಿ ಅಗತ್ಯವಿದ್ದರೆ ಪ್ರಿಂಟ್ ತೆಗೆದುಕೊಳ್ಳಿ.
  • ನಂತರ ಸಂಬಂಧಿತ ಕಾಲೇಜು ಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಪತಿಯನ್ನು ಸಲ್ಲಿಸಿ.

ತೀರ್ಮಾನ:-

ಕರ್ನಾಟಕ ಸರ್ಕಾರವು ವಿದ್ಯಾಸಿರಿ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡಿದ್ದು, ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಮೊದಲು ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತ ಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ದೇಶದ ಪ್ರಗತಿಗೆ ಕಾರಣೀಕರ್ತರಾಗಿ.


ಇತರ ಪ್ರಮುಖ ಲಿಂಕುಗಳು :-


Join WhatsApp

Join Now

Join Telegram

Join Now

Leave a Comment