ವಿದ್ಯಾರ್ಥಿಗಳಿಗೆ ಟಾಟಾ ಗ್ರೂಪ್ ನ ಯೋಜನೆ ಕಡೆಯಿಂದ ಭರ್ಜರಿ ಸಿಹಿಸುದ್ದಿ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಟಾಟಾ ಗ್ರೂಪ್ ಕಡೆಯಿಂದ ಸ್ಕಾಲರ್ಶಿಪ್ ಅನ್ನು ಬಿಡುಗಡೆ ಮಾಡಿದ್ದು, ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಉತ್ತಮ ಶಿಕ್ಷಣಕ್ಕಾಗಿ ಈ ಸಹಾಯಧನವನ್ನು ತಮ್ಮದಾಗಿಸಿಕೊಳ್ಳಿ.
Tata Group Scholarship 2026
ಹಲವಾರು ವಿದ್ಯಾರ್ಥಿಗಳಿಗೆ ತಾವು ಉತ್ತಮ ಶಿಕ್ಷಣವನ್ನು ಪಡೆದುಕೊಂದು ಸರಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂಬ ಗುರಿಯನ್ನು ಹೊಂದಿರುತ್ತಾರೆ ಆದರೆ ಹಣಕಾಸಿನ ಕೊರತೆಯಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲೇ ಮುಗಿಸಿ ಶಿಕ್ಷಣದಲ್ಲಿ ಹಿಂದುಳಿಯುವ ವಿದ್ಯಾರ್ಥಿಗಳನ್ನು ನಾವು ಕಾಣಬಹುದು. ಇಂತಹ ವಿದ್ಯಾರ್ಥಿಗಳಿಗೆ ಟಾಟಾ ಗ್ರೂಪ್ ಆರ್ಥಿಕವಾಗಿ ಸಹಾಯಮಾಡುವ ಮೂಲಕ ವಿದ್ಯಾರ್ಥಿಗಳ ನೆರವಿಗೆ ನಿಂತಿದೆ.
ಈ ಒಂದು ಸ್ಕಾಲರ್ಶಿಪ್ ಗೆ ಸಂಬಂಧಿಸಿದಂತೆ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಯಲ್ಲಿ ಸಂಪೂರ್ಣ ಮಾಹಿತಿಯನ್ನು ನೋಡಬಹುದು. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವ ಮೊದಲು ಸ್ಕಾಲರ್ಶಿಪ್ ಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ಅಗತ್ಯ ದಾಖಲೆಗಳು, ಅರ್ಹತಾ ಮಾನದಂಡ ಹಾಗೂ ಇನ್ನಿತರೆ ಮಾಹಿತಿಗಳ ಬಗ್ಗೆ ಸಂಪೂರ್ಣವಾಗಿ ಕೆಳಗೆ ನೀಡಿರುತ್ತೇವೆ ಅದನ್ನು ಓದಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.
| ಸ್ಕಾಲರ್ಶಿಪ್ ಹೆಸರು | ಟಾಟಾ ಗ್ರೂಪ್ ಸ್ಕಾಲರ್ಶಿಪ್ |
| ಒಟ್ಟು ಸಹಾಯಧನ | ರೂ. 15,000-1,00,000 |
ಸಂಕ್ಷಿಪ್ತ ಮಾಹಿತಿ:
ಟಾಟಾ ಗ್ರೂಪ್ ನ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನ ಮೂಲಕ ರೂ. 15,000 ದಿಂದ 1,00,000 ವರೆಗೆ ಸಹಾಯಧನವನ್ನು ನೀಡುತ್ತಿದ್ದು, 11ನೇ ತರಗತಿ, 12ನೇ ತರಗತಿ, ಡಿಪ್ಲೊಮಾ ಹಾಗೂ ಪದವಿಯನ್ನು ಓದುತ್ತಿರುವ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಶೈಕ್ಷಣಿಕ ಅರ್ಹತೆ:
- 11ನೇ ತರಗತಿ, 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- ಪದವಿ, ಡಿಪ್ಲೊಮಾ, ಐಟಿಐ ಓದುತ್ತಿರುವ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- ವೃತ್ತಿಪರ ಕೋರ್ಸ್ ಅಂದರೆ ಇಂಜಿನಿಯರಿಂಗ್, ಮೆಡಿಕಲ್, MBA ಓದುತ್ತಿರುವ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಸಹಾಯಧನದ ವಿವರ:
| ಅರ್ಹ ವಿದ್ಯಾರ್ಥಿಗಳು | ಒಟ್ಟು ಸಹಾಯಧನ |
| 11ನೇ ತರಗತಿ, 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು | 15,000 |
| ಪದವಿ, ಡಿಪ್ಲೊಮಾ, ಐಟಿಐ ಓದುತ್ತಿರುವ ವಿದ್ಯಾರ್ಥಿಗಳು | 18,000 |
| ವೃತ್ತಿಪರ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು | 1,00,000 |
Tata Group Scholarship 2026
ಅರ್ಹತಾ ಮಾನದಂಡ: Tata Group Scholarship 2026
- ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ನಿವಾಸಿಯಾಗಿರಬೇಕು.
- ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು.
- ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ರಷ್ಟು ಅಂಕಗಳನ್ನು ಪಡೆದಿರಬೇಕು.
- ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
ಅಗತ್ಯ ದಾಖಲೆಗಳು:
- ಶೈಕ್ಷಣಿಕ ಅಂಕಪಟ್ಟಿ
- ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಬ್ಯಾಂಕ್ ಪಾಸ್ ಬುಕ್
- ಇಮೇಲ್ ಐಡಿ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವ ವಿಧಾನ: Tata Group Scholarship 2026
- ಅಧಿಕೃತ ವೆಬ್ ಸೈಟ್ ಗೆ ಭೇಟಿನೀಡಿ Tata Group
- ನಂತರ ಇಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಳ್ಳಿ.
- ನಂತರ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.
ತೀರ್ಮಾನ:
ಈ ಹಿಂದೆ ಟಾಟಾ ಗ್ರೂಪ್ ನ ಯೋಜನೆಯಡಿಯಲ್ಲಿ 13,000 ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನ ಮೂಲಕ ಸಹಾಯಧನವನ್ನು ನೀಡಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನ ಮೂಲಕ ರೂ. 15,000 ದಿಂದ 1,00,000 ವರೆಗೆ ಸಹಾಯಧನವನ್ನು ನೀಡುಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.





