NIMHANS: ರೂ. 30,000 ವೇತನ, ಬೆಂಗಳೂರಿನ ನಿಮ್ಹಾನ್ಸ್ ಭರ್ಜರಿ ಉದ್ಯೋಗಾವಕಾಶ!

On: Thursday, March 12, 2026 1:07 PM
NIMHANS

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಆರೋಗ್ಯ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿದ್ದೀರಾ? ಹಾಗಾದ್ದರೆ ನಿಮಗೊಂದು ಸಂತಸದ ಸುದ್ದಿ. ಬೆಂಗಳೂರಿನ ಪ್ರತಿಷ್ಠಿತ ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯು 2026 ರಲ್ಲಿ ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

NIMHANS Recruitment in kannada

Join WhatsApp

Join Now

Join Telegram

Join Now

ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯು ಮಾರ್ಚ್ 6, 2026 ರಂದು ಬಿಡುಗಡೆ ಮಾಡಿದ್ದು, ಈ ಹುದ್ದೆಗಳನ್ನು ಅಲಂಕರಿಸಬೇಕೆಂದಿರುವವರು ಮಾರ್ಚ್ 28, 2026 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಬೆಂಗಳೂರಿನಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ (NIMHANS) ವಿವಿಧ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

NIMHANS

ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಆಯ್ಕೆ ಪ್ರಕ್ರಿಯೆ, ವೇತನ ಶ್ರೇಣಿ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಉದ್ಯೋಗಸಲಹೆ ಗೆ ಭೇಟಿ ನೀಡಿ.


ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (NIMHANS)
ಹುದ್ದೆಯ ಹೆಸರು ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ 08 ಹುದ್ದೆಗಳು
ವಿದ್ಯಾರ್ಹತೆ ಎಂ.ಎಸ್ಸಿ, ಬಿ.ಎಸ್ಸಿ ಅಥವಾ ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು
ವಯಸ್ಸಿಯ ಮಿತಿ ಫೀಲ್ಡ್ ಕೋಆರ್ಡಿನೇಟರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ಗರಿಷ್ಟ 40 ವರ್ಷ
ವೇತನ ಶ್ರೇಣಿ ₹30,000
ನೇರ ಸಂದರ್ಶನ ನಡೆಯುವ ದಿನಾಂಕ 28-03-2026

ಹುದ್ದೆಯ ಕಿರು ಪರಿಚಯ:

ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯು (NIMHANS) ಒಟ್ಟು 08 ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಬಿ.ಎಸ್ಸಿ, ಜಿ.ಏನ್. ಎಂ, ಡಿ.ಎಂ.ಎಲ್.ಟಿ ಹಾಗೂ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಗರಿಷ್ಟ 35 ರಿಂದ 40 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಸಂಕ್ಷಿಪ್ತ ವಿವರ:

ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯು (NIMHANS) ಒಟ್ಟು 08 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗಳ ಸಂಕ್ಷಿಪ್ತ ವಿವರ ಈ ಕೆಳಕಂಡಂತಿದೆ.

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ಫೀಲ್ಡ್ ಕೋಆರ್ಡಿನೇಟರ್ ಹುದ್ದೆಗಳು 01 ಹುದ್ದೆಗಳು
ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳು 07 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಗಳು:

1. ಫೀಲ್ಡ್ ಕೋಆರ್ಡಿನೇಟರ್ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸಮಾಜ ಕಾರ್ಯ, ಸೈಕಾಲಜಿ ಅಥವಾ ಸಮಾಜ ಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
  • ಆರೋಗ್ಯ ಕ್ಷೇತ್ರದಲ್ಲಿ ಸಮುದಾಯ ಆಧಾರಿತ ಸಮೀಕ್ಷೆ ಅಥವಾ ಸಂಶೋದನೆಯಲ್ಲಿ ಅನುಭವವನ್ನು ಹೊಂದಿರಬೇಕು.
  • ಅಭ್ಯರ್ಥಿಗಳಿಗೆ ತಮ್ಮ ತಂಡದೊಂದಿಗೆ ಪರಸ್ಪರ ಕೆಲಸದ ಕೌಶಲ್ಯ ಹಾಗೂ ದತ್ತಾಂಶ ಸಂಗ್ರಹ ಕೌಶಲ್ಯವನ್ನು ಹೊಂದಿರಬೇಕಾಗುತ್ತದೆ.
  • ಜೊತೆಗೆ, ಮುಖ್ಯವಾಗಿ ಕನ್ನಡ ಭಾಷೆಯನ್ನು ಓದಲು, ಬರೆಯಲು ಹಾಗೂ ಮಾತನಾಡಲು ಬರಬೇಕು.

2. ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಸಮಾಜ ಕಾರ್ಯ, ಸೈಕಾಲಜಿ, ಸಮಾಜ ಶಾಸ್ತ್ರ, ಮಹಿಳಾ ಅಧ್ಯಯನ ಅಥವಾ ಗ್ರಾಮೀಣಾಭಿವೃದ್ಧಿಯಲ್ಲಿ ಪದವಿಯನ್ನು ಹೊಂದಿರಬೇಕು ಅಥವಾ ಜಿ.ಏನ್.ಎಂ, ಬಿ.ಎಸ್ಸಿ, ಡಿ.ಎಂ.ಎಲ್.ಟಿ, ಎ.ಏನ್.ಎಂ ಪದವಿಯನ್ನು ಹೊಂದಿರಬೇಕು.
  • ಅಭ್ಯರ್ಥಿಗಳು ಇಂಗ್ಲಿಷ್ ಹಾಗೂ ಕನ್ನಡ ಭಾಷೆಯಲ್ಲಿ ಪ್ರಾವೀಣ್ಯತೆಯನ್ನು ಹೊಂದಿರಬೇಕು ಜೊತೆಗೆ ತಮಿಳು, ಹಿಂದಿ ಹಾಗೂ ತೆಲುಗು ಭಾಷೆಯಲ್ಲಿ ಹೆಚ್ಚಿನ ಪ್ರಾವೀಣ್ಯತೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ವಿವರ:

ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ (NIMHANS) ನಿಯಮಗಳ ಅನ್ವಯ ಅಭ್ಯರ್ಥಿಗಳು ಗರಿಷ್ಟ ಈ ಕೆಳಗೆ ನೀಡಲಾದ ವಯೋಮಿತಿಯನ್ನು ಮೀರಿರಬಾರದು.

  • ಫೀಲ್ಡ್ ಕೋಆರ್ಡಿನೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
  • ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಸರ್ಕಾರದ ಕೆಲವು ನಿಯಮಗಳ ಅನುಸಾರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ (NIMHANS) ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳುವುದರಿಂದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯ ಇರುವುದಿಲ್ಲ.

ಅಗತ್ಯ ದಾಖಲೆಗಳು:

ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ದಾಖಲೆಗಳನ್ನು ನೇರ ಸಂದರ್ಶನ ನಡೆಯುವ ಸಮಯದಲ್ಲಿ ತೆಗೆದುಕೊಂಡು ಹೋಗಬೇಕಾಗುತ್ತದೆ.

  • ಆಧಾರ್ ಕಾರ್ಡ್
  • ಶೈಕ್ಷಣಿಕ ಅಂಕ ಪಟ್ಟಿ
  • ಅನುಭವ ಪ್ರಮಾಣಪತ್ರ
  • ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
  • ಜಾತಿ ಪ್ರಮಾಣ ಪತ್ರ (ಮೀಸಲಾತಿ ಅನ್ವಯ ಆಯ್ಕೆ ಮಾಡುವುದಾದರೆ)
  • ಅಭ್ಯರ್ಥಿಗಳ ಸಹಿ
  • ವಯಸ್ಸಿನ ಪುರಾವೆ

ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಹುದ್ದೆಗೆ ಸಂಬಂಧಿಸಿದ ವೇತನ ಶ್ರೇಣಿ :

ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ (NIMHANS) ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ವಿಭಿನ್ನ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

  • ಕೋಆರ್ಡಿನೇಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ: ಮಾಸಿಕ ₹30,000 ನಿಗದಿಪಡಿಸಲಾಗಿದೆ
  • ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ: ₹20,000 ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಅರ್ಜಿಯನ್ನು ಸಲ್ಲಿಸುವ ಅಗತ್ಯ ಇರುವುದಿಲ್ಲ. ಬದಲಾಗಿ 28-03-2026 ರಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಈ ಕೆಳಗೆ ನೀಡಿರುವಂತೆ ಸಿದ್ದತೆಯನ್ನು ಮಾಡಿಕೊಂಡು ಭಾಗವಹಿಸಬೇಕಾಗುತ್ತದೆ.

  • ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಭಾಗಿ ಆಗುವ ಮೊದಲು ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ನಂತರ ಭಾಗವಹಿಸಿ.
  • ಅಭ್ಯರ್ಥಿಗಳು ಸಂದರ್ಶನಕ್ಕೆ ಭಾಗವಹಿಸುವ ಮೊದಲು ಇತ್ತೀಚಿನ ರೆಸೂಮ್ ಅನ್ನು ಸಿದ್ಧಪಡಿಸಿಕೊಳ್ಳಿ.
  • ನಂತರ ತಮ್ಮ ಶೈಕ್ಷಣಿಕ ಪ್ರಮಾಣ ಪತ್ರ, ಐಡಿ ಪ್ರೂಫ್, ಅನುಭವ ಪ್ರಮಾಣ ಪತ್ರ, ವರ್ಗ ಪ್ರಮಾಣ ಪತ್ರ ಹಾಗೂ ಇವುಗಳ ಜೊತೆಗೆ ಸ್ವಯಂ ದೃಢೀಕರಣ ಪತ್ರ ಹಾಗೂ ಪಾಸ್ಪೋರ್ಟ್ ಅಳತೆಯ ಫೋಟೋವನ್ನು ತೆಗೆದುಕೊಂಡು ಹೋಗೆ.
  • ಜೊತೆಗೆ ಮುಖ್ಯವಾಗಿ ಯಾವಾಗ ಎಷ್ಟು ಸಮಯಕ್ಕೆ ಸಂದರ್ಶನ ನಡೆಯುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ.
  • ನಿಗದಿಪಡಿಸಿದ ದಿನಾಂಕದಂದು ನೇರ ಸಂದರ್ಶನಕ್ಕೆ ಭಾಗವಹಿಸಿ, ಸಂದರ್ಶಯನ್ ಆರಂಭವಾಗುವ ಮೊದಲ 30 ನಿಮಿಷಗಳ ಒಳಗೆ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ಕೆಳಗೆ ನೀಡಿರುವ ಎರಡು ಹಂತಗಳ ಮೂಲಕ ಅಭ್ಯರ್ಥಿಗಳನ್ನು ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅವುಗಳೆಂದರೆ,

  • ಲಿಖಿತ ಪರೀಕ್ಷೆ:

ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ಮಾಡುತ್ತದೆ. ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕ ಗಳಿಸಿದರೆ ಮುಂದಿನ ಹಂತಕ್ಕೆ ಆಯ್ಕೆ ಆಗುತ್ತಾರೆ.

  • ನೇರ ಸಂದರ್ಶನ:

ಅಭ್ಯರ್ಥಿಗಳಿಗೆ ಎರಡನೇ ಹಂತದಲ್ಲಿ ನೇರ ಸಂದರ್ಶನವನ್ನು ಮಾಡಲಾಗುತ್ತದೆ. ಈ ಹಂತದಲ್ಲಿ ಕೂಡ 50% ಅಂಕ ಗಳಿಸುವುದು ಕಡ್ಡಾಯವಾಗಿದೆ.


ಪ್ರಮುಖ ದಿನಾಂಕಗಳು:

ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿರುವ ದಿನಾಂಕ06-03-2026
ವಾಕ್ ಇನ್ ಸಂದರ್ಶನ (ನೇರ ಸಂದರ್ಶನ) ನಡೆಯುವ ದಿನಾಂಕ 28-03-2026
ನೇರ ಸಂದರ್ಶನಕ್ಕೆ ಹೆಸರು ನೋಂದಾಯಿಸಿಕೊಳ್ಳಲು ಕೊನೆಯ ಸಮಯ ಬೆಳಿಗ್ಗೆ 10:00 (28-03-2026)
ನೇರ ಸಂದರ್ಶನ ನಡೆಯುವ ಸಮಯ ಬೆಳಿಗ್ಗೆ 10:30 (28-03-2026)

ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್ಯಾವುದೇ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ.

ತೀರ್ಮಾನ:

ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯು (NIMHANS) 2026 ರಲ್ಲಿ ಒಟ್ಟು 08 ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳು ಈ ಹುದ್ದೆಗೆ ಯಾವುದೇ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ. 28-03-2026 ರಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಭಾಗವಹಿಸಿದರೆ ಸಾಕಾಗುತ್ತದೆ.

ನೀವೇನಾದರೂ ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ ಉದ್ಯೋಗ ಮಾಡಲು ಆಸಕ್ತಿಯನ್ನು ಹೊಂದಿದ್ದರೆ, ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತ ಪಡಿಸಿಕೊಂಡು ನಂತರ ಸರ್ದರ್ಶನಕ್ಕೆ ಭಾಗಿ ಆಗಿ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು:

ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ ಸಂಸ್ಥೆ ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (NIMHANS).

ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯು ಒಟ್ಟು 08 ಫೀಲ್ಡ್ ಕೋಆರ್ಡಿನೇಟರ್ ಹಾಗೂ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

ಫೀಲ್ಡ್ ಕೋಆರ್ಡಿನೇಟರ್ ಹುದ್ದೆಗೆ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಮೀರಿರಬಾರದು.

ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಮೀರಿರಬಾರದು.


ಇತರೆ ಪ್ರಮುಖ ಲಿಂಕುಗಳು:


Join WhatsApp

Join Now

Join Telegram

Join Now

Leave a Comment