SCR: ರೈಲ್ವೆ ನೇಮಕಾತಿ 2026 – 10th + ITI ಪಾಸ್ ಆಗಿದ್ರೆ ಸಾಕು! 2801 ಅಪ್ರೆಂಟಿಸ್ ಹುದ್ದೆಗಳು

On: Monday, March 16, 2026 12:14 PM
SCR

ನಮಸ್ಕಾರ ಸ್ನೇಹಿತರೆ, ನೀವೇನಾದರೂ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಆಸಕ್ತಿಯನ್ನು ಹೊಂದಿದ್ದೀರಾ? ರೈಲ್ವೆ ಇಲಾಖೆಯಲ್ಲಿ ವೃತ್ತಿ ಅನುಭವವನ್ನು ಹೊಂದಬೇಕೆನ್ನುವುದು ನಿಮ್ಮ ಕನಸೇ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ದಕ್ಷಿಣ ಮಧ್ಯ ರೈಲ್ವೆ ಯು 2026 ರಲ್ಲಿ 2801 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

SCR Recruitment in kannada

Join WhatsApp

Join Now

Join Telegram

Join Now

ಅಪ್ರೆಂಟಿಸ್ ಕಾಯ್ದೆ 1961 ಹಾಗೂ 1962 ರ ಅಪ್ರೆಂಟಿಸ್ ಶಿಪ್ ನಿಯಮಗಳ ಅನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ದಕ್ಷಿಣ ಮಧ್ಯ ರೈಲ್ವೆ (SCR) ಯು ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್ ಹಾಗೂ ಇನ್ನಿತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕೇವಲ SSLC ಹಾಗೂ ITI ನಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ದಕ್ಷಿಣ ಮಧ್ಯ ರೈಲ್ವೆ ನೇಮಕಾತಿಯಲ್ಲಿ ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 12-03-2026 ರಿಂದಲೇ ಅವಕಾಶ ಕಲ್ಪಿಸಲಾಗಿದ್ದು, 11-04-2026 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ ಸರ್ಕಾರದಲ್ಲಿ ಉದ್ಯೋಗ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

SCR

ದಕ್ಷಿಣ ಮಧ್ಯ ರೈಲ್ವೆ (SCR) ಯ ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತಾ ಮಾನದಂಡಗಳೇನು? ವಯೋಮಿತಿ ಎಷ್ಟು ಎನ್ನುವುದನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹೊಸ ಹೊಸ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದಾಗ ಅವುಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಉದ್ಯೋಗಸಲಹೆ ಗೆ ಭೇಟಿ ನೀಡಿ.


ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆರೈಲ್ವೆ ನೇಮಕಾತಿ ಕೋಶ, ದಕ್ಷಿಣ ಮಧ್ಯ ರೈಲ್ವೆ (SCR), ಸಿಕಂದರಾಬಾದ್
ಹುದ್ದೆಯ ಹೆಸರು ಆಕ್ಟ್ ಅಪ್ರೆಂಟಿಸ್
ಹುದ್ದೆಯ ಸಂಖ್ಯೆ ಒಟ್ಟು 2801 ಹುದ್ದೆಗಳು
ಉದ್ಯೋಗ ಸ್ಥಳ ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ತಮಿಳುನಾಡು
ವಿದ್ಯಾರ್ಹತೆ ಅಭ್ಯರ್ಥಿಗಳು ಜಸ್ಟ್ 10th ಹಾಗೂ ITI ಪಾಸ್ ಆಗಿರಬೇಕು
ವಯಸ್ಸಿಯ ಮಿತಿ ಅಭ್ಯರ್ಥಿಗಳು ಕನಿಷ್ಠ 15 ವರ್ಷದಿಂದ ಗರಿಷ್ಟ 24 ವರ್ಷ ವಯೋಮಿತಿಯನ್ನು ಹೊಂದಿರಬೇಕು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-04-2026

ಹುದ್ದೆಯ ಕಿರು ಪರಿಚಯ:

ದಕ್ಷಿಣ ಮಧ್ಯ ರೈಲ್ವೆ (SCR) ನೇಮಕಾತಿಯು 2026 ರಲ್ಲಿ ಒಟ್ಟು 2801 ಆಕ್ಟ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಅಲ್ಲಿ ಶೇಕಡಾ 50% ಅಂಕವನ್ನು ಗಳಿಸಿ ಉತ್ತೀರ್ಣರಾಗಿರಬೇಕು ಹಾಗೂ ITI ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.

ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 15 ವರ್ಷದಿಂದ ಗರಿಷ್ಟ 24 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಕೆಲವು ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.

ಹುದ್ದೆಯ ಸಂಕ್ಷಿಪ್ತ ವಿವರ:

ದಕ್ಷಿಣ ಮಧ್ಯ ರೈಲ್ವೆ (SCR) ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಯಾವ ಘಟಕಗಳಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಎಲೆಕ್ಟ್ರಿಷಿಯನ್ 1258 ಹುದ್ದೆಗಳು
ಫಿಟ್ಟರ್ 539 ಹುದ್ದೆಗಳು
ಎಸಿ ಮೆಕ್ಯಾನಿಕ್ 251 ಹುದ್ದೆಗಳು
ವೆಲ್ಡರ್ 202 ಹುದ್ದೆಗಳು
ಕೋಪಾ 181 ಹುದ್ದೆಗಳು
ಡಿಸೇಲ್ ಮೆಕ್ಯಾನಿಕ್ 105 ಹುದ್ದೆಗಳು
ಎಲೆಕ್ಟ್ರಾನಿಕ್ ಮೆಕ್ಯಾನಿಕ್ 88 ಹುದ್ದೆಗಳು
ಯಂತ್ರಶಿಲ್ಪಿ 54 ಹುದ್ದೆಗಳು
ಕೈಗಾರಿಕಾ ಎಲೆಕ್ಟೋನಿಕ್ಸ್ 33 ಹುದ್ದೆಗಳು
ವರ್ಣಚಿತ್ರಕಾರ 32 ಹುದ್ದೆಗಳು
ಎಂಎಂಟಿಎಂ 24 ಹುದ್ದೆಗಳು
ಬಡಗಿ 22 ಹುದ್ದೆಗಳು
ಮೋಟಾರ್ ಮೆಕ್ಯಾನಿಕ್ 12 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಕನಿಷ್ಠ 50% ಅಂಕವನ್ನು ಗಳಿಸಿ ಉತ್ತೀರ್ಣರಾಗಿರಬೇಕು.
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಎಲೆಕ್ಟ್ರಿಷಿಯನ್, ಫಿಟ್ಟರ್, ವೆಲ್ಡರ್, ಡಿಸೇಲ್ ಮೆಕ್ಯಾನಿಕ್ ಹಾಗೂ ಇನ್ನಿತರ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ITI ಪ್ರಮಾಣಪತ್ರವನ್ನು ಹೊಂದಿರಬೇಕು.
ವಿಶೇಷ ಸೂಚನೆ: “ನೀವೇನಾದರೂ ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಪದವಿಯನ್ನು ಹೊಂದಿದ್ದರೆ, ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.”

ವಯೋಮಿತಿ ವಿವರ:

ದಕ್ಷಿಣ ಮಧ್ಯ ರೈಲ್ವೆ (SCR) ನೇಮಕಾತಿ 2026 ರ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅಭ್ಯರ್ಥಿಗಳು ಕನಿಷ್ಠ 15 ವರ್ಷದಿಂದ ಗರಿಷ್ಟ 24 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ಸರ್ಕಾರದ ಕೆಲವು ನಿಯಮಗಳ ಪ್ರಕಾರ, ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಹಾಗೂ NCL ಅಭ್ಯರ್ಥಿಗಳಿಗೆ 3 ವರ್ಷಗಳು
  • ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷಗಳು
  • PwBD ಅಭ್ಯರ್ಥಿಗಳಿಗೆ 10 ವರ್ಷಗಳು
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳು

ಅರ್ಜಿ ಶುಲ್ಕ:

ದಕ್ಷಿಣ ಮಧ್ಯ ರೈಲ್ವೆ, ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವರು ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಹೀಗಿದೆ,

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ, ಮಹಿಳಾ ಅಭ್ಯರ್ಥಿಗಳಿಗೆ ಹಾಗೂ ಟ್ರಾನ್ಸ್ ಜಂಡರ್ ಅಭ್ಯರ್ಥಿಗಳಿಗೆ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ₹100/-

ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.

ಅಗತ್ಯ ದಾಖಲೆಗಳು:

ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಎಲ್ಲಾ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ಅವುಗಳೆಂದರೆ,

  • ಶೈಕ್ಷಣಿಕ ಪ್ರಮಾಣಪತ್ರ
  • SSLC ಅಂಕಪಟ್ಟಿ
  • ಐಟಿಐ ಪ್ರಮಾಣಪತ್ರ
  • ಅಭ್ಯರ್ಥಿಗಳ ಸಹಿ
  • ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ
  • ಆಧಾರ್ ಕಾರ್ಡ್
  • ಜಾತಿ ಪ್ರಮಾಣಪತ್ರ

ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಹುದ್ದೆಗೆ ಸಂಬಂಧಿಸಿದ ವೇತನ ಶ್ರೇಣಿ :

  • ಅಪ್ರೆಂಟಿಸ್ ಕಾಯ್ದೆಯ ಪ್ರಕಾರ, ಅಭ್ಯರ್ಥಿಗಳು ಆಕ್ಟ್ ಅಪ್ರೆಂಟಿಸ್ ತರೆಬೇತಿ ಪಡೆದುಕೊಳ್ಳುವ ಸಂದರ್ಭದಲ್ಲಿ ಮಾಸಿಕ ಸ್ಟೈಫಂಡ್ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.
ಇಲ್ಲಿ ಗಮನಿಸಿ: “ಅಭ್ಯರ್ಥಿಗಳಿಗೆ ಈ ತರಬೇತಿಯು ಒಂದು ವರ್ಷಗಳ ಅವಧಿಗೆ ಮಾತ್ರ ಸೀಮಿತವಾಗಿರುತ್ತದೆ. ಇದು ಖಾಯಂ ಉದ್ಯೋಗವಲ್ಲ.”

ಅರ್ಜಿ ಸಲ್ಲಿಸುವ ವಿಧಾನ:

ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

  • ಅಭ್ಯರ್ಥಿಗಳು ಮೊದಲು ದಕ್ಷಿಣ ಮಧ್ಯ ರೈಲ್ವೆ ಅಧಿಕೃತ ವೆಬ್ಸೈಟ್ https://scr.indianrailways.gov.in ಗೆ ಭೇಟಿ ನೀಡಿ.
  • ಅಲ್ಲಿರುವ ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ವಿಭಾಗವನ್ನು ಆಯ್ಕೆ ಮಾಡಿ ಕ್ಲಿಕ್ ಮಾಡಿ.
  • ಅಪ್ಲಿಕೇಶನ್ ಅಲ್ಲಿ ಕೇಳಲಾದ ತಮ್ಮ ವೈಯಕ್ತಿಕ ವಿವರ ಹಾಗೂ ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ
  • ಶೈಕ್ಷಣಿಕ ಪ್ರಮಾಣ ಪತ್ರ, ಪಾಸ್ಪೋರ್ಟ್ ಅಳತೆಯ ಫೋಟೋವನ್ನು ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ನಿಮ್ಮ ವರ್ಗಗಳಿಗೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ.
  • ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಪಟ್ಟಿ:

ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಮೆರಿಟ್ ಆಧಾರಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಯಾವುದೇ ಲಿಖಿತ ಪರೀಕ್ಷೆ ಬರೆಯುವ ಅಗತ್ಯ ಇರುವುದಿಲ್ಲ. ಅಭ್ಯರ್ಥಿಗಳು SSLC ಅಲ್ಲಿ ಗಳಿಸಿದ ಅಂಕಗಳ ಹಾಗೂ ITI ನಲ್ಲಿ ಗಳಿಸಿದ ಸರಾಸರಿ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.

  • ಟ್ರೈ ಬ್ರೆಕಿಂಗ್:

ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಇಬ್ಬರು ಅಭ್ಯರ್ಥಿಗಳು ಸಮಾನ ಅಂಕ ಗಳಿಸಿದ್ದರೆ, ಅವರಲ್ಲಿ ಹಿರಿಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

  • ದಾಖಲಾತಿ ಪರಿಶೀಲನೆ:

ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಒಂದು ಹಂತದಲ್ಲಿ ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ, ವೈದ್ಯಕೀಯ ಪ್ರಮಾಣಪತ್ರ ಹಾಗೂ ಇನ್ನಿತರ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ.

  • ವೈದ್ಯಕೀಯ ಪ್ರಮಾಣಪತ್ರ:

ಅಭ್ಯರ್ಥಿಗಳು ಮಾನ್ಯತೆ ಪಡೆದ ಸರ್ಕಾರಿ ಅಧಿಕೃತ ವೈದ್ಯರಿಂದ ವೈದ್ಯಕೀಯ ತಪಾಸಣೆಯನ್ನು ಮಾಡಿಸಿಕೊಂಡು ವೈದ್ಯಕೀಯ ಪ್ರಮಾಣಪತ್ರವನ್ನು ಹೊಂದಿರಬೇಕು.


ಪ್ರಮುಖ ದಿನಾಂಕಗಳು:

ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ 12-03-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 12-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-04-2026

ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ತೀರ್ಮಾನ:

ದಕ್ಷಿಣ ಮಧ್ಯ ರೈಲ್ವೆ ಯು 2026 ರಲ್ಲಿ 2801 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಇದು ಖಾಯಂ ಸರ್ಕಾರಿ ಉದ್ಯೋಗವಲ್ಲ ಬದಲಾಗಿ ಒಂದು ವರ್ಷದ ಅಪ್ರೆಂಟಿಸ್ ಶಿಪ್ ತರಬೇತಿ ಆಗಿದೆ. SSLC ಹಾಗೂ ITI ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಯನ್ನು ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ನೀವೇನಾದರೂ ಈ ತರಬೇತಿಯನ್ನು ಪಡೆದುಕೊಳ್ಳಲು ಅರ್ಹರಾಗಿದ್ದರೆ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು:

ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ ಸಂಸ್ಥೆ ರೈಲ್ವೆ ನೇಮಕಾತಿ ಕೋಶ, ದಕ್ಷಿಣ ಮಧ್ಯ ರೈಲ್ವೆ (SCR), ಸಿಕಂದರಾಬಾದ್.

ದಕ್ಷಿಣ ಮಧ್ಯ ರೈಲ್ವೆ (SCR) ನೇಮಕಾತಿಯಲ್ಲಿ ಒಟ್ಟು 2801 ಹುದ್ದೆಗಳು ಖಾಲಿ ಇದೆ.

ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾದರೆ SSLC ಶೇಕಡಾ 50% ಅಂಕವನ್ನು ಗಳಿಸಿರಬೇಕು ಹಾಗೂ ITI ಪ್ರಮಾಣಪತ್ರವನ್ನು ಹೊಂದಿರಬೇಕು.

ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-04-2026


ಇತರೆ ಪ್ರಮುಖ ಲಿಂಕುಗಳು:


Join WhatsApp

Join Now

Join Telegram

Join Now

Leave a Comment