BSF Constable Recruitment 2026
ಹತ್ತನೇ ತರಗತಿ ಪಾಸ್ ಆದವರಿಗೆ ಭಾರತ ಸರ್ಕಾರವು ಅತ್ಯುತ್ತಮ ಅವಕಾಶವನ್ನು ಕಲ್ಪಿಸಿದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ (BSF Constable Recruitment) 2025 ನೇ ಸಾಲಿನ ಮೆರಿಟೋರಿಯಸ್ ಸ್ಪೋರ್ಟ್ಸ್ ಪರ್ಸನ್ ಕೋಟಾದಡಿ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ದೇಶದ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸಬೇಕು ಎಂದು ಬಯಸುವವರಿಗೆ ಇದೊಂದು ಸುವರ್ಣ ಅವಕಾಶ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಯಲ್ಲಿ ಸಂಪೂರ್ಣ ಮಾಹಿತಿಯನ್ನು ನೋಡಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 27-12-2025 ರಿಂದ 15-01-2026 ರ ವರೆಗೂ ಅವಕಾಶವಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಹತಾ ಮಾನದಂಡ, ಅಗತ್ಯ ದಾಖಲೆಗಳು ಹಾಗೂ ಇನ್ನಿತರೆ ಮಾಹಿತಿಗಳ ಬಗ್ಗೆ ಸಂಪೂರ್ಣವಾಗಿ ಕೆಳಗೆ ನೀಡಿರುತ್ತೇವೆ ಅದನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳ ಅವಲೋಕನ: (BSF Constable Recruitment 2026)
| ಸಂಸ್ಥೆಯ ಹೆಸರು | ಬಾರ್ಡರ್ ಸೆಕ್ಯೂರಿಟಿ ಫೋರ್ಸ್ (BSF) |
| ಹುದ್ದೆಯ ಹೆಸರು | ಕಾನ್ಸ್ಟೇಬಲ್ – ಕ್ರೀಡಾ ಕೋಟಾ |
| ಹುದ್ದೆಯ ಸಂಖ್ಯೆ | 549 |
| ಉದ್ಯೋಗ ಸ್ಥಳ | ಭಾರತದಾದ್ಯಂತ |
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 27-12-2025 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-01-2026 |
ಸಂಕ್ಷಿಪ್ತ ಮಾಹಿತಿ:
ಭಾರತ ಸರ್ಕಾರವು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ 2025 ನೇ ಸಾಲಿನ ಮೆರಿಟೋರಿಯಸ್ ಸ್ಪೋರ್ಟ್ಸ್ ಪರ್ಸನ್ ಕೋಟಾದಡಿ ಒಟ್ಟು 549 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಈ ನೇಮಕಾತಿ ಪ್ರಕ್ರಿಯೆಯು ಕ್ರೀಡಾ ಸಾಧನೆಯ ಮೇಲೆ ಆಧಾರಿತವಾಗಿದ್ದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಗೆದ್ದ ಅಭ್ಯರ್ಥಿಗೆ ನೇಮಕಾತಿಯಲ್ಲಿ ಮೊದಲ ಆದ್ಯತೆ ನೀಡಲಾಗುವುದು. ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ 18 ರಿಂದ 23 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಹರಾಗಿರುತ್ತಾರೆ.

ಹುದ್ದೆಗಳ ವಿವರ:
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
| ಪುರುಷ ಅಭ್ಯರ್ಥಿಗಳು | 277 |
| ಮಹಿಳಾ ಅಭ್ಯರ್ಥಿಗಳು | 272 |
BSF Constable Recruitment 2026
ಶೈಕ್ಷಣಿಕ ಅರ್ಹತೆ:
- ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಅಭ್ಯರ್ಥಿಯು ಕಡ್ಡಾಯವಾಗಿ ಕ್ರೀಡಾ ಅರ್ಹತೆಯನ್ನು ಹೊಂದಿರಬೇಕು.
- ಅಭ್ಯರ್ಥಿಯು 15/01/2024 ರಿಂದ 15/01/2026 ರ ನಡುವೆ ನಡೆದ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಗೆದ್ದಿರಬೇಕು ಅಥವಾ ಭಾರತವನ್ನು ಪ್ರತಿನಿಧಿಸಿರಬೇಕು.
- ಒಲಂಪಿಕ್ಸ್, ವಿಶ್ವಕಪ್ ಏಷ್ಯನ್ ಗೇಮ್ಸ್, ಸೀನಿಯರ್/ ಜೂನಿಯರ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗಳಲ್ಲಿ ಭಾಗವಹಿಸಿದ ದಾಖಲೆಯನ್ನು ಹೊಂದಿರಬೇಕು.
ವಯೋಮಿತಿ:
- ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ: 3 ವರ್ಷ
- SC/ST ಅಭ್ಯರ್ಥಿಗಳಿಗೆ: 5 ವರ್ಷ
- ಇಲಾಖಾ ಅಭ್ಯರ್ಥಿಗಳಿಗೆ ನಿಗದಿತ ನಿಯಮದಂತೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ/OBC ಪುರುಷ ಅಭ್ಯರ್ಥಿಗಳಿಗೆ ರೂ. 159 ಅರ್ಜಿ ಶುಲ್ಕ ಇರುತ್ತದೆ.
ಮಹಿಳೆಯರು/SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
- ಆಯ್ಕೆಗೊಂಡ ಅಭ್ಯರ್ಥಿಗೆ ರೂ. 21,700 ರಿಂದ 69,100 ವರೆಗೆ ಮಾಸಿಕ ವೇತನ ನೀಡಲಾಗುವುದು.
- ಕೇಂದ್ರ ಸರ್ಕಾರಿ ನೌಕರರಿಗೆ ಇತರೆ ಭತ್ಯೆಗಳು ನಿಯಮಾನುಸಾರವಾಗಿ ಲಭಿಸುತ್ತದೆ.
ಅಗತ್ಯ ದಾಖಲೆಗಳು:
- ಶೈಕ್ಷಣಿಕ ಪ್ರಮಾಣಪತ್ರ
- ಕ್ರೀಡಾ ಪ್ರಮಾಣಪತ್ರ
- ಅಂಕಪಟ್ಟಿ
- ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ಓಟರ್ ಐಡಿ
ಅರ್ಜಿ ಸಲ್ಲಿಸುವ ವಿಧಾನ:
- BSF ಅಧಿಕೃತ ವೆಬ್ ಸೈಟ್ https://rectt.bsf.gov.in/ ಗೆ ಭೇಟಿನೀಡಿ
- BSF ನೇಮಕಾತಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ, ಸೂಚಿಸಿದ ಅರ್ಜಿ ನಮೂನೆಯನ್ನು ಭರ್ತಿಮಾಡಿ
- ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿಮಾಡಿರುವ ಬಗ್ಗೆ ಖಚಿತಪಡಿಸಿಕೊಳ್ಳಿ
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅಗತ್ಯವಿದ್ದರೆ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ.
- ದಿನಾಂಕ 15-01-2026 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕಗಳು:
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27-12-2025
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-01-2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 15-01-2026
ಆಯ್ಕೆ ಪ್ರಕ್ರಿಯೆ:
- ದೈಹಿಕ ಗುಣಮಟ್ಟ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
- ದಾಖಲಾತಿ ಪರಿಶೀಲನೆ
- ಮೆರಿಟ್ ಪಟ್ಟಿ
ಪ್ರಮುಖ ಲಿಂಕ್ ಗಳು:
| ಅಧಿಸೂಚನೆಯ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ತೀರ್ಮಾನ:
ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ 2025 ನೇ ಸಾಲಿನ ಮೆರಿಟೋರಿಯಸ್ ಸ್ಪೋರ್ಟ್ಸ್ ಪರ್ಸನ್ ಕೋಟಾದಡಿ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ದೇಶದ ರಕ್ಷಣೆಯೊಂದಿಗೆ ಕ್ರೀಡಾ ಕ್ಷೇತ್ರದಲ್ಲೂ ತಮ್ಮ ಸಾಧನೆಯನ್ನು ಮುಂದುವರೆಸಬೇಕು ಎಂದು ಬಯಸುವವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 15-01-2026 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.





