ನಮಸ್ಕಾರ ಸ್ನೇಹಿತರೆ, ನೀವೇನಾದರೂ ಶೈಕ್ಷಣಿಕ ಕ್ಷೇತ್ರದಲ್ಲಿ ಉದ್ಯೋಗ ಮಾಡುವ ಕನಸ್ಸನ್ನು ಕಾಣುತ್ತಿದ್ದೀರಾ? ನೀವು ಶಿಕ್ಷಕರಾಗಿ ಅನೇಕ ಮಕ್ಕಳಿಗೆ ಮಾದರಿ ಆಗಬೇಕೆಂದು ಕನಸ್ಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ! ಬಾಗಲಕೋಟೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಗಿರುವ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ವಿವಿಧ ಶೈಕ್ಷಣಿಕ ಘಟಕಗಳಲ್ಲಿ ಖಾಲಿ ಇರುವ ಅನೇಕ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ.
BVVS Recruitment in kannada
ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (BVVS), ಬಾಗಲಕೋಟೆಯು ತಮ್ಮ ಶಿಕ್ಷಣ ಘಟಕದಲ್ಲಿ ಖಾಲಿ ಇರುವ ಪ್ರಾಚಾರ್ಯರು, ಉಪನ್ಯಾಸಕರು, ದ್ವಿತೀಯ ದರ್ಜೆ ಸಹಾಯಕರು ಹಾಗೂ ಶಿಕ್ಷಕರು ಸೇರಿದಂತೆ ಅನೇಕ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು, ವಯೋಮಿತಿ, ವೇತನ ಶ್ರೇಣಿ, ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಉದ್ಯೋಗಸಲಹೆಗೆ ಭೇಟಿ ನೀಡಿ.
ಹುದ್ದೆಯ ಕಿರು ವಿಮರ್ಶೆ:
| ನೇಮಕಾತಿ ಸಂಸ್ಥೆ | ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (BVVS), ಬಾಗಲಕೋಟೆ |
| ಹುದ್ದೆಯ ಹೆಸರು | ಪ್ರಾಚಾರ್ಯರು. ಶಿಕ್ಷಕರು, ಉಪನ್ಯಾಸಕರು ಹಾಗೂ ದ್ವಿತೀಯ ದರ್ಜಸಹಾಯಕರು |
| ವಿದ್ಯಾರ್ಹತೆ | ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ |
| ವಯಸ್ಸಿಯ ಮಿತಿ | ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು |
| ವೇತನ ಶ್ರೇಣಿ | ಅಭ್ಯರ್ಥಿಗಳ ವೃತ್ತಿ ಅನುಭವ ಹಾಗೂ ಹುದ್ದೆಗೆ ಸಂಬಂಧಿಸಿದಂತೆ ವೇತನ ಸಿಗಲಿದೆ. |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22-03-2026 |
ಹುದ್ದೆಯ ಬಗ್ಗೆ:
ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (BVVS), ಬಾಗಲಕೋಟೆಯು ಅಧೀನದಲ್ಲಿರುವ ಶಾಲಾ ಮತ್ತು ಕಾಲೇಜುಗಳಲ್ಲಿ ಶಿಕ್ಷಕರು, ಉಪನ್ಯಾಸಕರು, ಪ್ರಾಚಾರ್ಯರು ಹಾಗೂ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವುದು ಕಡ್ಡಾಯವಾಗಿದೆ.
ಹುದ್ದೆಯ ಸಂಕ್ಷಿಪ್ತ ವಿವರ:
ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (BVVS), ಬಾಗಲಕೋಟೆಯು ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅವುಗಳ ವಿವರ ಹೀಗಿದೆ.
1. ಪ್ರಾಥಮಿಕ ವಿಭಾಗ: (ಇಂಗ್ಲಿಷ್ ಮಾಧ್ಯಮ)
- ಶಿಕ್ಷಕರು (ಸಮಾಜ, ಇಂಗ್ಲಿಷ್, EVS ಹಾಗೂ ಗಣಿತ)
2. ಪ್ರೌಢ ಶಾಲಾ ವಿಭಾಗ: (ಕನ್ನಡ ಮತ್ತು ಇಂಗ್ಲಿಷ್ ಮೀಡಿಯಂ)
- ಮುಖ್ಯ ಅಧ್ಯಾಪಕರು
- ಸಹ ಶಿಕ್ಷಕರು (ಕನ್ನಡ, ಇಂಗ್ಲಿಷ್, ವಿಜ್ಞಾನ,ಸಮಾಜ ಹಾಗೂ ಹಿಂದಿ)
- ಚಿತ್ರಕಲಾ ಶಿಕ್ಷಕರು
- ದೈಹಿಕ ಶಿಕ್ಷಕರು
- ಸಂಗೀತ ಶಿಕ್ಷಕರು
3. ಪದವಿ ಪೂರ್ವ ಕಾಲೇಜು ವಿಭಾಗ: (ಆರ್ಸ್ಟ್, ಕಾಂಮೆರ್ಸ್ ಮತ್ತು ಸೈನ್ಸ್)
- ಪ್ರಾಚಾರ್ಯರು
- ಕನ್ನಡ ಉಪನ್ಯಾಸಕರು
- ಇಂಗ್ಲಿಷ್ ಉಪನ್ಯಾಸಕರು
- ವ್ಯವಹಾರ ಅಧ್ಯಯನ ಮತ್ತು ಲೆಕ್ಕ ಶಾಸ್ತ್ರ ಉಪನ್ಯಾಸಕರು
- ಅರ್ಥಶಾಸ್ತ್ರ ಉಪನ್ಯಾಸಕರು
- ಇತಿಹಾಸ ಉಪನ್ಯಾಸಕರು
- ರಸಾಯನ ಶಾಸ್ತ್ರ, ಜೀವಶಾಸ್ತ್ರ ಹಾಗೂ ಭೌತಶಾಸ್ತ್ರ ಉಪನ್ಯಾಸಕರು
- ದೈಹಿಕ ಉಪನ್ಯಾಸಕರು
4. ಬೋಧಕೇತರ ಹುದ್ದೆಗಳು:
- ದ್ವಿತೀಯ ದರ್ಜೆ ಸಹಾಯಕರು
ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆಗಳು:
1. ಪ್ರಾಥಮಿಕ ಶಾಲಾ ಶಿಕ್ಷಕರು:
ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎ, ಬಿ.ಎಸ್ಸಿ, ಎಂ.ಎ, ಎಂ.ಎಸ್ಸಿ ಅಲ್ಲಿ ಪದವಿಯನ್ನು ಹೊಂದಿರಬೇಕು. ಜೊತೆಗೆ D.Ed ವಿದ್ಯಾರ್ಹತೆಯನ್ನು ಹೊಂದಿರಬೇಕು.
2. ಪ್ರೌಢ ಶಾಲಾ ಶಿಕ್ಷಕರು ಹಾಗೂ ಉಪನ್ಯಾಸಕರು:
ಪ್ರೌಢ ಶಾಲಾ ಶಿಕ್ಷಕರು ಹಾಗೂ ಉಪನ್ಯಾಸಕ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಬಿ.ಎ, ಬಿ.ಎಸ್ಸಿ, ಬಿ.ಕಾಂ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು ಹಾಗೂ ಎಂ.ಎ, ಎಂ.ಎಸ್ಸಿ, ಎಂ.ಕಾಂ ನಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಇವುಗಳ ಜೊತೆಗೆ ಕಡ್ಡಾಯವಾಗಿ ಬಿ.ಇಡಿ ಪೂರ್ಣಗೊಳಿಸಿರಬೇಕು. ಮುಖ್ಯವಾಗಿ, ಇಂಗ್ಲಿಷ್ ಮಾದ್ಯಮದಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲ ಆದ್ಯತೆ ನೀಡಲಾಗುವುದು.
3. ಪ್ರಾಚಾರ್ಯರು ಹಾಗೂ ಮುಖ್ಯ ಅಧ್ಯಾಪಕರು:
ಪ್ರಾಚಾರ್ಯರು ಹಾಗೂ ಮುಖ್ಯ ಅಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಎಂ.ಎ, ಎಂ.ಎಸ್ಸಿ, ಎಂ.ಕಾಂ ನಲ್ಲಿ ಪದವಿಯನ್ನು ಹೊಂದಿರಬೇಕು. ಹಾಗೂ ಇವುಗಳ ಜೊತೆಗೆ ಬಿ.ಇಡಿ ಪದವಿಯನ್ನು ಹೊಂದಿರಬೇಕು. ಮುಖ್ಯವಾಗಿ ಅಭ್ಯರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ 5 ವರ್ಷದಿಂದ 8 ವರ್ಷ ವೃತ್ತಿ ಅನುಭವವನ್ನು ಹೊಂದಿರಬೇಕು.
4. ದ್ವಿತೀಯ ದರ್ಜೆ ಸಹಾಯಕರು:
ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ, ಬಿ.ಕಾಂ, ಬಿ.ಬಿ.ಎ ಅಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಇವುಗಳ ಜೊತೆಗೆ ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು (ಟ್ಯಾಲಿ) ಹೊಂದಿರಬೇಕು.
5. ಚಿತ್ರಕಲೆ ಮತ್ತು ಸಂಗೀತ ವಿಭಾಗ:
ಚಿತ್ರಕಲೆ ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಬಿ.ವಿ.ಎ ಹಾಗೂ ಬಿ.ವಿ.ಎಸ್.ಸಿ ಅಲ್ಲಿ ಪದವಿಯನ್ನು ಹೊಂದಿರಬೇಕು ಹಾಗೂ ಸಂಗೀತ ಶಿಕ್ಷಕರಾಗಬೇಕೆಂದಿರುವವರು ಸಂಗೀತ ಹಾಗೂ ನೃತ್ಯದಲ್ಲಿ ಪದವಿಯನ್ನು ಹೊಂದಿರಬೇಕು.
6. ದೈಹಿಕ ಶಿಕ್ಷಕರು:
ದೈಹಿಕ ಶಿಕ್ಷಕರು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಡಿಪೋಮಾ ಅನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (BVVS), ಬಾಗಲಕೋಟೆಯು ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಹಾಗೂ ಗರಿಷ್ಟ ಎಷ್ಟು ವಯೋಮಿತಿ ಎಂದು ನಿಗದಿಪಡಿಸಿರುವುದಿಲ್ಲ. ಅಭ್ಯರ್ಥಿಗಳ ಗರಿಷ್ಟ ವಯೋಮಿತಿಯು ವೃತ್ತಿ ಅನುಭವ ಹಾಗೂ ಕೆಟಗರಿ ಮೇಲೆ ಅವಲಂಬಿತವಾಗಿರುತ್ತದೆ.
ವಯೋಮಿತಿ ಸಡಿಲಿಕೆ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ.
ಅರ್ಜಿ ಶುಲ್ಕ:
ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ, ಬಾಗಲಕೋಟೆ ಸಂಸ್ಥೆಯು ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಅಗತ್ಯ ದಾಖಲೆಗಳು:
ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (BVVS), ಬಾಗಲಕೋಟೆಯು ಪ್ರಸ್ತುತ ಸಾಲಿನಲ್ಲಿ ಶೈಕ್ಷಣಿಕ ಘಟಕಗಳಲ್ಲಿ ಬೋಧಕ ಹಾಗೂ ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.
- ಶೈಕ್ಷಣಿಕ ಪ್ರಮಾಣಪತ್ರ
- ಅನುಭವ ಪ್ರಮಾಣಪತ್ರ
- ಅಭ್ಯರ್ಥಿಗಳ ಸಹಿ
- ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ
- ಆಧಾರ್ ಕಾರ್ಡ್
ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಹುದ್ದೆಗೆ ಸಂಬಂಧಿಸಿದ ವೇತನ ಶ್ರೇಣಿ :
ಶಿಕ್ಷಕರು, ಉಪನ್ಯಾಸಕರು, ಪ್ರಾಚಾರ್ಯರು, ದ್ವಿತೀಯ ದರ್ಜೆ ಸಹಾಯಕರು, ಹಾಗೂ ಇತರೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘಗಳ ನಿಯಮಾವಳಿಗಳ ಪ್ರಕಾರ ವೇತನವನ್ನು ನಿಗದಿಪಡಿಸಲಾಗುತ್ತದೆ.
ಶಿಕ್ಷಕರು, ಉಪನ್ಯಾಸಕರು, ಪ್ರಾಚಾರ್ಯರು, ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು ಅನುದಾನ ರಹಿತ ಹುದ್ದೆಗಳಾಗಿದ್ದು, ಅಭ್ಯರ್ಥಿಗಳು ಹೊಂದಿರುವ ಅನುಭವ ಹಾಗೂ ಶೈಕ್ಷಣಿಕ ಅರ್ಹತೆಗಳ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (BVVS) ಗಳ ಅಡಿಯಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಈ ಕೆಳಗೆ ನೀಡಿರುವಂತೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
- ಅಭ್ಯರ್ಥಿಗಳು ಮೊದಲು ತಮ್ಮ ವೈಯಕ್ತಿಕ ವಿವರ ಹಾಗೂ ಶೈಕ್ಷಣಿಕ ವಿವರಗಳನ್ನು ಒಳಗೊಂಡ ರೆಸೂಮ್ ಅನ್ನು ಸಿದ್ಧಪಡಿಸಿಕೊಳ್ಳಿ.
- ನಂತರ ರೆಸೂಮ್ ಜೊತೆಗೆ ಶೈಕ್ಷಣಿಕ ಪ್ರಮಾಣ ಪತ್ರ, ಐಡಿ ಪ್ರೂಫ್, ಅನುಭವ ಪ್ರಮಾಣ ಪತ್ರ, ಹಾಗೂ ಪಾಸ್ಪೋರ್ಟ್ ಅಳತೆಯ ಫೋಟೋವನ್ನು ಲಗತ್ತಿಸಿ.
- ಅಗತ್ಯ ದಾಖಲೆಗಳನ್ನು ಒಳಗೊಂಡ ಅರ್ಜಿಯನ್ನು ಈ ಕೆಳಗೆ ನೀಡಲಾದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿ.
| “ಕಾರ್ಯಾಧ್ಯಕ್ಷರು, ಶ್ರೀ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ, ಬಾಗಲಕೋಟೆ ” |
- ನೀವೇನಾದರೂ ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ, ಅಗತ್ಯ ದಾಖಲೆಗಳನ್ನು chairmanhscom@gmail.com ಗೆ ಕಳುಹಿಸಿ.
ಆಯ್ಕೆ ಪ್ರಕ್ರಿಯೆ:
- ದಾಖಲೆಗಳ ಪರಿಶೀಲನೆ:
ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಅನುಭವಗಳ ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ.
- ವೈದ್ಯಕೀಯ ಸಂದರ್ಶನ ಮತ್ತು ಡೆಮೋ ಕ್ಲಾಸ್:
ಶಾರ್ಟ್ ಲಿಸ್ಟ್ ಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ ಹಾಗೂ ಅಭ್ಯರ್ಥಿಗಳ ಬೋಧನಾ ಕೌಶಲ್ಯ ಹೇಗಿದೆ ಎನ್ನುವುದನ್ನು ತಿಳಿಯಲು ಡೆಮೋ ಕ್ಲಾಸ್ ಗಳನ್ನು ಮಾಡಿಸಲಾಗುತ್ತದೆ.
ಪ್ರಮುಖ ದಿನಾಂಕಗಳು:
| ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿರುವ ದಿನಾಂಕ | 12-03-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 12-03-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22-03-2026 |
ಪ್ರಮುಖ ಲಿಂಕುಗಳು:
| ಅಧಿಕೃತ ಅಧಿಸೂಚನೆ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್ | ಅಭ್ಯರ್ಥಿಗಳು ಅಂಚೆ ಮೂಲಕ ಅಥವಾ ಇಮೇಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. |
ಹೆಚ್ಚಿನ ಮಾಹಿತಿಗಾಗಿ:
| “ಅಭ್ಯರ್ಥಿಗಳು ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕು ಎನ್ನವುವೂ ಆಸಕ್ತಿಯನ್ನು ಹೊಂದಿದ್ದರೆ, ಕಾರ್ಯಾಧ್ಯಕ್ಷರು, ಹೈಸ್ಕೂಲ್ ಆಡಳಿತ ಮಂಡಳಿ ಬಿವಿವಿ ಸಂಘದ ಕಾಂಟಾಕ್ಟ್ ನಂಬರ್ 8073021367 ಅಥವಾ 9902005315 ಗೆ ಕರೆ ಮಾಡಿ.” |
ತೀರ್ಮಾನ:
ಬಾಗಲಕೋಟೆಯ ಪ್ರತಿಷ್ಠಿತ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (BVVS) ತಮ್ಮ ಶೈಕ್ಷಣಿಕ ಘಟಕಗಳಲ್ಲಿ ಶಿಕ್ಷಕರು, ಉಪನ್ಯಾಸಕರು, ಪ್ರಾಚಾರ್ಯರು, ದ್ವಿತೀಯ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿದ್ದರೆ, ನೇಮಕಾತಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಒಂದಿಕೊಂಡು ಅರ್ಜಿ ಸಲ್ಲಿಸಿ.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ ಸಂಸ್ಥೆ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (BVVS), ಬಾಗಲಕೋಟೆ.
ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (BVVS), ಬಾಗಲಕೋಟೆ ಸಂಸ್ಥೆಯು ಶಿಕ್ಷಕರು, ಉಪನ್ಯಾಸಕರು, ಪ್ರಾಚಾರ್ಯರು ಹಾಗೂ ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.
ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೇಮಕಾತಿ ಅಧಿಸೂಚನೆ ಹೊರಡಿಸಿದ 10 ದಿನಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಅಂದರೆ 22-03-2026 ಎಂದು ಅಂದಾಜಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಇತರೆ ಪ್ರಮುಖ ಲಿಂಕುಗಳು:
- NIMHANS: ರೂ. 30,000 ವೇತನ, ಬೆಂಗಳೂರಿನ ನಿಮ್ಹಾನ್ಸ್ ಭರ್ಜರಿ ಉದ್ಯೋಗಾವಕಾಶ!
- RRC Western Railway: ರೈಲ್ವೆ ನೇಮಕಾತಿ 2026: 5,349 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ!
- Indian Navy: ರೂ. 40,000 ವೇತನ! ಅಗ್ನಿವೀರ್ ಹುದ್ದೆಗಳ ಬೃಹತ್ ನೇಮಕಾತಿ, ಜಸ್ಟ್ 10th ಪಾಸ್ ಆಗಿದ್ರೆ ಸಾಕು ಭಾರೀ ಉದ್ಯೋಗಾವಕಾಶ!
- HPCL : ₹2,80,000/- 731 ಜೂನಿಯರ್ ಎಕ್ಸಿಕ್ಯೂಟಿವ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಂದೇ ಅರ್ಜಿ ಸಲ್ಲಿಸಿ,





