Free Laptop : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಬಂಪರ್ ಗಿಫ್ಟ್! ಉಚಿತ ಲ್ಯಾಪ್ಟಾಪ್ ಪಡೆಯುವ ಚಾನ್ಸ್ ಮಿಸ್ ಮಾಡ್ಕೋಬೇಡಿ!

On: Thursday, January 29, 2026 4:36 PM
Free Laptop

Join WhatsApp

Join Now

Join Telegram

Join Now

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್! ನೀವೇನಾದರೂ ಪ್ರಥಮ ಹಾಗೂ ದ್ವಿತೀಯ PUC , ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದೀರಾ? ಹಾಗಿದ್ದರೆ ಈ ಆಫರ್ ನಿಮಗಾಗಿ.

Labour Card Free Laptop In Kannada

ಕರ್ನಾಟಕ ಸರ್ಕಾರವು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಡಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ (Free Laptop) ಮಾಡಲು ಮುಂದಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ.

ನೀವೇನಾದರೂ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಬೇಕಾದರೆ, ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ಒಂದು ಲೇಖನದ ಮೂಲಕ ಉಚಿತ ಲ್ಯಾಪ್ಟಾಪ್ (Free Laptop)ವಿತರಣಾ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇದೆ ರೀತಿಯ ಇನ್ನಷ್ಟು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಉದ್ಯೋಗಸಲಹೆಗೆ ಭೇಟಿ ನೀಡಿ.

ಯೋಜನೆಯ ಕಿರು ನೋಟ:

ಯೋಜನೆಯ ಹೆಸರು ಉಚಿತ ಲ್ಯಾಪ್ಟಾಪ್ ವಿತರಣಾ ಯೋಜನೆ
ಅರ್ಹ ಫಲಾನುಭವಿಗಳು ವಿದ್ಯಾರ್ಥಿಗಳು
ಕೊಡುಗೆ ಉಚಿತ ಲ್ಯಾಪ್ಟಾಪ್
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮತ್ತು ಆಫ್ಲೈನ್

ಏನಿದು ಉಚಿತ ಲ್ಯಾಪ್ಟಾಪ್ ವಿತರಣಾ ಯೋಜನೆ ?

ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯಡಿಯಲ್ಲಿ ಜಾರಿಗೆ ತರಲಾದ ‘ಉಚಿತ ಲ್ಯಾಪ್ಟಾಪ್ ವಿತರಣಾ ಯೋಜನೆ’ಯಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಆಧುನಿಕ ಶಿಕ್ಷಣವನ್ನು ಪಡೆಯಲು ನೆರವನ್ನು ನೀಡಿ, ಅವರ ಡಿಜಿಟಲ್ ಶಿಕ್ಷಣವನ್ನು ಪ್ರೋತ್ಸಾಹಿಸುವುದು ಹಾಗೂ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಬೆಂಬಲವನ್ನು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ PUC, ದ್ವಿತೀಯ PUC, ಪದವಿ, ಸ್ನಾತಕೋತ್ತರ ಪದವಿ, ITI ನಲ್ಲಿ ವ್ಯಾಸಂಗ ಮಾಡುತ್ತಿರುವ ಕಟ್ಟಡ ಕಾರ್ಮಿಕರ ಮಕ್ಕಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

ಯೋಜನೆಯ ಹಿನ್ನಲೆ:

  • ಡಿಜಿಟಲ್ ತಡೆ ನಿವಾರಣೆ:

ಈಗಿನ ಕಾಲಘಟ್ಟವು ಡಿಜಿಟಲ್ ಯುಗವೆಂದೇ ಪ್ರಸಿದ್ಧಿಯಾಗಿದ್ದು, ಎಲ್ಲಾ ವ್ಯವಹಾರಗಳು ಡಿಜಿಟಲ್ ಮೂಲಕವೇ ನಡೆಯುತ್ತದೆ. ಹಾಗೆಯೇ, ಇಂದಿನ ಶಿಕ್ಷಣ ವ್ಯವಸ್ಥೆಯೂ ಕೂಡ ಸಂಪೂರ್ಣ ಡಿಜಿಟಲ್ ರೂಪಕ್ಕೆ ಬಂದಿರುವುದರಿಂದ, ಆರ್ಥಿಕ ಸಂಕಷ್ಟದಲ್ಲಿರುವ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಸರ್ಕಾರವು ಉಚಿತ ಲ್ಯಾಪ್ಟಾಪ್ ನೀಡುವ ಮೂಲಕ ಶ್ರೀಮಂತ ಮಕ್ಕಳಿಗೆ ಸಮಾನವಾಗಿ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡುವುದು.

  • ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ:

ಇಂಜಿನಿಯರಿಂಗ್, ವೈದ್ಯಕೀಯ, ಕಂಪ್ಯೂಟರ್ ಆಧಾರಿತ ಕೋರ್ಸ್ ಗಳು ಹಾಗೂ ವೃತ್ತಿಪರ ಕೋರ್ಸ್ ಗಳಿಗೆ ತಾಂತ್ರಿಕ ಶಿಕ್ಷಣ ಅಗತ್ಯವಾಗಿದ್ದು, ಉಚಿತವಾಗಿ ಲ್ಯಾಪ್ಟಾಪ್ ನೀಡಿ ಅವರ ಕಲಿಕೆಯನ್ನು ಸುಲಭಗೊಳಿಸುವ ಮೂಲಕ ಅವರ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವುದು.

  • ಆರ್ಥಿಕ ಹೊರೆ ಕಡಿಮೆ ಮಾಡುವುದು:

ಬಡ ಕಾರ್ಮಿಕರಿಗೆ ತಮ್ಮ ಮಕ್ಕಳ ಶಿಕ್ಷಣಕ್ಕೆ ಅನಿವಾರ್ಯವಾದ ಸಾವಿರಾರು ರೂಪಾಯಿ ಬೆಲೆ ಬಾಳುವ ಲ್ಯಾಪ್ಟಾಪ್ ಖರೀದಿಸಲು ಸಾಧ್ಯವಿಲ್ಲದ ಕಾರಣ ಸರ್ಕಾರವೇ ಉಚಿತ ಲ್ಯಾಪ್ಟಾಪ್ ನೀಡುವ ಮೂಲಕ ಕಾರ್ಮಿಕರ ಮಕ್ಕಳ ಶಿಕ್ಷಣದ ಆರ್ಥಿಕ ಹೊರೆಯನ್ನು ಕಡಿಮೆಮಾಡುತ್ತದೆ.

  • ಆನ್ಲೈನ್ ಕಲಿಕೆಗೆ ನೆರವು:

ಶೈಕ್ಷಣಿಕ ವ್ಯವಸ್ಥೆಯಲ್ಲಿ ಕೋವಿಡ್-19 ನಂತರ ಆನ್ಲೈನ್ ಶಿಕ್ಷಣಕ್ಕೆ ಹೆಚ್ಚಿನ ಪ್ರಾಧಾನ್ಯತೆ ಇದ್ದು, ಕಾರ್ಮಿಕರ ಮಕ್ಕಳು ಹೊಸ ಪದ್ದತಿಗೆ ಹೊಂದಿಕೊಳ್ಳಲು ಹಾಗೂ ಆನ್ಲೈನ್ ಸಂಪನ್ಮೂಲಗಳನ್ನು ಬಳಸಲು ಈ ಯೋಜನೆಯು ನೆರವಾಗಿದೆ.

ಯೋಜನೆಯ ಸೌಲಭ್ಯ:

ಸರ್ಕಾರವು PUC, ಪದವಿ, ಸ್ನಾತಕೋತರ ಪದವಿ, ITI, ಡಿಪ್ಲೋಮಾ ಹಾಗೂ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಲ್ಯಾಪ್ಟಾಪ್ ಅನ್ನು (Free Laptop) ಉಚಿತವಾಗಿ ನೀಡುವುದು. ಇದರಿಂದಾಗಿ ಕಾರ್ಮಿಕರ ಕುಟುಂಬಕ್ಕೆ ದೊಡ್ಡ ಆರ್ಥಿಕ ನೆರವು ಸಿಗುತ್ತದೆ.

ಅರ್ಹತಾ ಮಾನದಂಡಗಳೇನು?

  • ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರುಬೇಕು.
  • ವಿದ್ಯಾರ್ಥಿಗಳ ತಂದೆ ಅಥವಾ ತಾಯಿಯಲ್ಲಿ ಒಬ್ಬರು ಕಡ್ಡಾಯವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾಗಿರಬೇಕು.
  • ಯಾವುದೇ ವರ್ಗದ ಕಾರ್ಮಿಕರ ಮಕ್ಕಳು ಉಚಿತ ಲ್ಯಾಪ್ಟಾಪ್ (Free Laptop)ಪಡೆಯಲು ಅರ್ಹರಾಗಿರುತ್ತಾರೆ.
  • ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ.
ಇಲ್ಲಿ ಗಮನಿಸಿ: “ಈ ಯೋಜನೆಯು ಕಾರ್ಮಿಕರ ಇಬ್ಬರು ಮಕ್ಕಳಿಗೆ ಮಾತ್ರ ಅನ್ವಹಿಸುತ್ತದೆ.”

ವಿದ್ಯಾರ್ಥಿಗಳು ಹೊಂದಿರಬೇಕಾದ ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣಪತ್ರ
  • ಶೈಕ್ಷಣಿಕ ಪ್ರಮಾಣಪತ್ರ
  • ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
  • ತಂದೆ ಅಥವಾ ತಾಯಿಯ ಲೇಬರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋ
  • ನಿವಾಸ ಪ್ರಮಾಣಪತ್ರ
  • ಪಡಿತರ ಚೀಟಿ

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ (Free Laptop)ಅನ್ನು ಪಡೆದುಕೊಳ್ಳಬೇಕಾದರೆ ಈ ಕೆಳಗೆ ನೀಡಿರುವ ಹಂತವನ್ನು ಅನುಸರಿಸಿ, ಅರ್ಜಿಯನ್ನು ಸಲ್ಲಿಸಿ.

ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ವಿದ್ಯಾರ್ಥಿಗಳು ನಿಮ್ಮ ತಾಲೂಕು ಅಥವಾ ಜಿಲ್ಲೆಯ ಕಾರ್ಮಿಕರ ಇಲಾಖಾ ಕಚೇರಿಗೆ ಭೇಟಿ ನೀಡಿ.
  • ಉಚಿತ ಲ್ಯಾಪ್ಟಾಪ್ (Free Laptop) ವಿತರಣಾ ಅರ್ಜಿ ಪ್ರತಿಯನ್ನು ಪಡೆದುಕೊಳ್ಳಿ.
  • ನಂತರ ಅರ್ಜಿ ಪ್ರತಿಯಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ
  • ಅರ್ಜಿ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಇಲಾಖೆಗೆ ಸಲ್ಲಿಸಿ ಸ್ವೀಕೃತಿ ಪತ್ರ ಪಡೆದುಕೊಳ್ಳಿ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಸೇವಾ ಸಿಂಧು ಅಧಿಕೃತ ವೆಬ್ಸೈಟ್ https://sevasindhu.karnataka.gov.in/ ಗೆ ಭೇಟಿ ನೀಡಿ.
  • ಮೊಬೈಲ್ ನಂಬರ್ ನಮೂದಿಸಿ ಲಾಗಿನ್ ಆಗಿ.
  • ನಂತರ ಕಾರ್ಮಿಕ ಇಲಾಖೆ ಎಂದು ಸರ್ಚ್ ಮಾಡಿ ಅಲ್ಲಿ ಬರುವ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ಗಾಗಿ ಅರ್ಜಿ ಅನ್ನು ಕ್ಲಿಕ್ ಮಾಡಿ
  • ನಂತರ, ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಿ.
  • ಅರ್ಜಿ ಸ್ವೀಕೃತಿಯನ್ನು ಪ್ರಿಂಟ್ ತಗೆದುಕೊಳ್ಳಿ.

ಹೆಚ್ಚಿನ ಮಾಹಿತಿಗಾಗಿ:

ಸೇವಾ ಸಿಂಧೂ ಸಹಾಯವಾಣಿ: 080-22230282
ಕಾರ್ಮಿಕರ ಇಲಾಖಾ ಸಹಾಯವಾಣಿ: 155214
ನಿಮ್ಮ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಿ.

ಕೊನೆಯ ನುಡಿ:

ಕರ್ನಾಟಕ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಕಾರ್ಮಿಕರ ಮಕ್ಕಳಿಗೆ ಶಿಕ್ಷಣಕ್ಕೆ ನೆರವನ್ನು ನೀಡಲು ಉಚಿತ ಲ್ಯಾಪ್ಟಾಪ್ ವಿತರಣಾ ಯೋಜನೆಯನ್ನು ಜಾರಿಗೆ ತಂದಿದ್ದು, ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಕಾರ್ಮಿಕರ ಮಕ್ಕಳಿಗೆ ಇದೊಂದು ಸುವರ್ಣಾವಕಾಶ. ಅರ್ಹ ವಿದ್ಯಾರ್ಥಿಗಳು ಇಂದೇ ಆನ್ಲೈನ್ ಅಥವಾ ನಿಮ್ಮ ಹತ್ತಿರದ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ.


ಇತರೆ ಪ್ರಮುಖ ಲಿಂಕುಗಳು:


Join WhatsApp

Join Now

Join Telegram

Join Now

Leave a Comment