Karwar Home Guard : ಯಾವುದೇ ಅರ್ಜಿ ಶುಲ್ಕವಿಲ್ಲ! ಯಾವುದೇ ಲಿಖಿತ ಪರೀಕ್ಷೆ ಇಲ್ಲ, ಕೇವಲ 10th ಪಾಸ್ ಆಗಿದ್ರೆ ಸಾಕು!

On: Thursday, February 19, 2026 11:43 AM
Karwar Home Guard

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಸಮಾಜಕ್ಕೆ ಸೇವೆ ಸಲ್ಲಿಸುವ ಜೊತೆಗೆ ಉದ್ಯೋಗವನ್ನು ಮಾಡುವ ಕನಸ್ಸು ಕಾಣುತ್ತಿದ್ದೀರಾ? ಹಾಗಿದ್ದರೆ ಈ ಮಾಹಿತಿ ನಿಮಗಾಗಿ. ಕಾರವಾರ ಜಿಲ್ಲಾ ಗೃಹರಕ್ಷಕ ದಳವು 2026 ರಲ್ಲಿ ಒಟ್ಟು 89 ಗೃಹರಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ನಿಮ್ಮ ಈ ಕನಸ್ಸನ್ನು ನನಸ್ಸು ಮಾಡಿಕೊಳ್ಳಲು ಇದೊಂದು ಸುವರ್ಣಾವಕಾಶ.

Karwar Home Guard Recruitment in Kannada

Join WhatsApp

Join Now

Join Telegram

Join Now

ನೀವು ಜಸ್ಟ್ 10 ಪಾಸ್ ಆಗಿದ್ರೆ ಸಾಕು ನೀವು ಗೃಹರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಿ. ಅಲ್ಲದೆ ಯಾವುದೇ ರೀತಿಯ ಲಿಖಿತ ಪರೀಕ್ಷೆಗಳಿರುವುದಿಲ್ಲ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಪುರುಷ ಹಾಗೂ ಮಹಿಳೆಯರಿಬ್ಬರಿಗೂ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು 10-03-2026 ಕೊನೆಯ ದಿನಾಂಕವಾಗಿದೆ.

ನೀವು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದೀರಾ? ಹಾಗಿದ್ದರೆ ಇಂದೇ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ. ಕಾರವಾರ ಗೃಹ ರಕ್ಷಕ ಇಲಾಖೆಯ ಪ್ರಕಾರ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ವೇತನ ಶ್ರೇಣಿ, ಆಯ್ಕೆ ಪ್ರಕ್ರಿಯೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ದಿನೇ ದಿನೇ ನಿಮಗೆ ಉದ್ಯೋಗಗಳ ಬಗ್ಗೆ ಹೊಸಹೊಸ ಮಾಹಿತಿ ಬೇಕಾದಲ್ಲಿ ನಮ್ಮ ವೆಬ್ಸೈಟ್ ಉದ್ಯೋಗ ಸಲಹೆ ಅನ್ನು ಫಾಲೋ ಮಾಡಿ.


ಹುದ್ದೆಯ ಕಿರು ಚಿತ್ರಣ:

ಸಂಸ್ಥೆಯ ಹೆಸರುಕರ್ನಾಟಕ ಗೃಹ ರಕ್ಷಕ ದಳ
ಹುದ್ದೆಯ ಹೆಸರು ಗೃಹರಕ್ಷಕ
ಒಟ್ಟು ಹುದ್ದೆಗಳ ಸಂಖ್ಯೆಒಟ್ಟು 89 ಹುದ್ದೆಗಳು
ವಿದ್ಯಾರ್ಹತೆ 10 ನೇ ತರಗತಿಯಲ್ಲಿ ಉತ್ತೀರ್ಣ
ಉದ್ಯೋಗ ಸ್ಥಳ ಕಾರವಾರ
ಅರ್ಜಿಸಲ್ಲಿಸುವ ವಿಧಾನ ಆಫ್ಲೈನ್

ಹುದ್ದೆಯ ಕಿರು ಪರಿಚಯ:

ಕಾರವಾರ ಗೃಹರಕ್ಷಕ ಇಲಾಖೆಯು ಒಟ್ಟು 89 ಗೃಹರಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಆಫ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗೃಹ ರಕ್ಷಕ ದಳವು ಪೊಲೀಸ್ ಪಡೆಗೆ ಪೂರಕವಾಗಿ ಕಾರ್ಯನಿರ್ವಹಿಸುವ ಸ್ವಯಂ ಪ್ರೇರಿತ ಸಂಸ್ಥೆಯಾಗಿದ್ದು, ಸಮಾಜಸೇವೆಯಲ್ಲಿ ಆಸಕ್ತಿಯನ್ನು ಹೊಂದಿರುವವರಿಗೆ ಈ ಹುದ್ದೆಗೆ ಉತ್ತಮ ಆಯ್ಕೆ.

ಗೃಹ ರಕ್ಷಕ ಹುದ್ದೆಗೆ 10 ತರಗತಿಯಲ್ಲಿ ಉತ್ತೀರ್ಣರಾಗಿರುವ ಕನಿಷ್ಠ 19 ರಿಂದ ಗರಿಷ್ಟ 50 ವರ್ಷ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಯನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳುತ್ತಾ ಹೋಗೋಣ.

ಹುದ್ದೆಯ ವಿವರ:

ಕಾರವಾರ ಗೃಹ ರಕ್ಷಕ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಒಟ್ಟು 89 ಗೃಹ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಹುದ್ದೆಯು ಕೇವಲ ಪುರುಷರಿಗೆ ಮಾತ್ರ ಸೀಮಿತವಾಗಿರದೆ ಮಹಿಳೆಯರು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಹುದ್ದೆಗೆ ಅರ್ಜಿ ಸಲ್ಲಿಸುವವರು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳೇನು?

ಕಾರವಾರ ಗೃಹ ರಕ್ಷಕ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ, ಗೃಹ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಹಾಗೂ ಸಂಸ್ಥೆಯಲ್ಲಿ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿ ಬೇಕಿದ್ದರೆ ಅಧಿಸೂಚನೆಯನ್ನು ಓದಿಕೊಳ್ಳಿ.

ಗ್ರಹ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೊಂದಿರಬೇಕಾದ ದೈಹಿಕ ಅಳತೆ:

  • ಗೃಹ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಪುರುಷ ಅಭ್ಯರ್ಥಿಗಳು ಕನಿಷ್ಠ 168 C.M ಎತ್ತರ ಹೊಂದಿರಬೇಕು ಹಾಗೂ ಮಹಿಳಾ ಅಭ್ಯರ್ಥಿಗಳು ಕನಿಷ್ಠ 157 C.M ಎತ್ತರ ಇರಬೇಕು

ವಯೋಮಿತಿ:

ಅಭ್ಯರ್ಥಿಗಳು ಯಾವುದೇ ಹುದ್ದೆಗೂ ಅರ್ಜಿ ಸಲ್ಲಿಸಬೇಕಾದರೆ ಹುದ್ದೆಗೆ ಸಂಬಂಧಿಸಿದ ವಯೋಮಿತಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಅದೇ ರೀತಿಯಲ್ಲಿ ಕಾರವಾರ ಜಿಲ್ಲಾ ಗೃಹ ರಕ್ಷಕ ದಳ 2026 ರ ನೇಮಕಾತಿ ಅಧಿಸೂಚನೆಯಲ್ಲಿ ಗೃಹ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.

  • ಗ್ರಹ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷಗಳು ವಯೋಮಿತಿಯನ್ನು ಹೊಂದಿರಬೇಕು. ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ಕಾರವಾರ ಜಿಲ್ಲಾ ಗೃಹರಕ್ಷಕ ಇಲಾಖೆಯ ನಿಯಮಗಳ ಪ್ರಕಾರ, ವಿವಿಧ ವರ್ಗಗಳಳಿಗೆ ಸಂಬಂಧಿಸಿದಂತೆ ವಯೋಮಿತಿ ಸಡಿಲಿಕೆ ಇರುತ್ತದೆ. ಇನ್ನಷ್ಟು ಮಾಹಿತಿಗಾಗಿ ಅಧಿಸೂಚನೆಯನ್ನು ಓದಿಕೊಳ್ಳಿ.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಹುದ್ದೆಗೂ ಅರ್ಜಿ ಸಲ್ಲಿಸಬೇಕಾದರೆ ಹುದ್ದೆಗೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿ ಮಾಡುವುದು ಕಡ್ಡಾಯವಾಗಿದೆ. ಆದರೆ, ಕಾರವಾರ ಜಿಲ್ಲಾ ಗೃಹರಕ್ಷಕ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

ಅಗತ್ಯ ದಾಖಲೆಗಳು:

ಕಾರವಾರ ಜಿಲ್ಲಾ ಗೃಹರಕ್ಷಕ ಇಲಾಖೆಯ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.

  • ಆಧಾರ್ ಕಾರ್ಡ್
  • ಓಟರ್ ಐಡಿ
  • ಶೈಕ್ಷಣಿಕ ಪ್ರಮಾಣಪತ್ರ
  • 10 ನೇ ತರಗತಿ ಅಂಕಪಟ್ಟಿ
  • ಪಾನ್ ಕಾರ್ಡ್
  • ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
  • ಜಾತಿ ಮತ್ತು ಆದಾಯ ಪ್ರಮಾಣಪತ್ರ
  • ವಾಸಸ್ಥಳ ದೃಢೀಕರಣ ಪತ್ರ
  • ವೈದ್ಯಕೀಯ ಪ್ರಮಾಣಪತ್ರ

ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಗೃಹ ರಕ್ಷಕ ಹುದ್ದೆಗೆ ಸಂಬಂಧಿಸಿದ ವೇತನ ಶ್ರೇಣಿ :

ಕಾರವಾರ ಜಿಲ್ಲಾ ಗೃಹರಕ್ಷಕ ಇಲಾಖೆಯ ನಿಯಮಗಳ ಪ್ರಕಾರ, ಗೃಹ ರಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವಿವಿಧ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜಿಲ್ಲಾ ಗೃಹ ರಕ್ಷಕ ಇಲಾಖೆಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
  • ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು
  • ಅಲ್ಲಿ ನೀಡಲಾದ ಎಲ್ಲಾ ವೈಯಕ್ತಿಕ ಹಾಗೂ ಶೈಕ್ಷಣಿಕ ಮಾಹಿತಿಯನ್ನು ಭರ್ತಿ ಮಾಡಿ
  • ಮೇಲೆ ನೀಡಲಾದ ಅಗತ್ಯ ದಾಖಲೆಗಳನ್ನು ಅರ್ಜಿ ನಮೂನೆಯೊಂದಿಗೆ ಲಗತ್ತಿಸಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಬೇಕಾದ ವಿಳಾಸ:

ಜಿಲ್ಲಾ ಗೃಹರಕ್ಷಕ ದಳದ ಕಚೇರಿ, ಗೃಹರಕ್ಷಕ ದಳ ಜಿಲ್ಲಾ ಬೋಧಕ ರಘು ಬಿ.ಸಿ (988057509) ಇವರನ್ನು ಸಂಪರ್ಕಿಸಿ.

ಆಯ್ಕೆ ಪ್ರಕ್ರಿಯೆ:

  • ದೈಹಿಕ ಅಳತೆ ಪರೀಕ್ಷೆ
  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ದಾಖಲೆಗಳ ಪರಿಶೀಲನೆ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕಈಗಾಗಲೇ ಆರಂಭಗೊಂಡಿದೆ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ10-03-2026

ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಇಲ್ಲಿ ಕ್ಲಿಕ್ ಮಾಡಿ

ತೀರ್ಮಾನ:

ಕಾರವಾರ ಜಿಲ್ಲಾ ಗೃಹರಕ್ಷಕ ಇಲಾಖೆಯು ಒಟ್ಟು 89 ಗೃಹ ರಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಶೈಕ್ಷಣಿಕ ಅರ್ಹತೆ ಹಾಗೂ ದೈಹಿಕ ಅರ್ಹತೆಯನ್ನು ಹೊಂದಿದ್ದೀರೋ? ಇಲ್ಲವೋ? ಎಂದು ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ. ಇನ್ನಷ್ಟು ಮಾಹಿತಿಗಾಗಿ ಈ ಮೇಲೆ ನೀಡಲಾದ ವಿಳಾಸಕ್ಕೆ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆಗೆ ಕರೆ ಮಾಡಿ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು:

ಗೃಹ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಗೃಹರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ ಕನಿಷ್ಠ 19 ವರ್ಷದಿಂದ ಗರಿಷ್ಟ 50 ವರ್ಷ.

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಒಟ್ಟು 89 ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.


ಇತರೆ ಪ್ರಮುಖ ಲಿಂಕುಗಳು:


Join WhatsApp

Join Now

Join Telegram

Join Now

Leave a Comment