ಈಗಷ್ಟೇ ವಿದ್ಯಾಭ್ಯಾಸ ಮುಗಿಸಿ ಉದ್ಯೋಗ ಹುಡುಕುತ್ತಿರುವವರಿಗೆ ಸಂತಸದ ಸುದ್ದಿ! ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ 2026ನೇ ಸಾಲಿನಲ್ಲಿ ಒಟ್ಟು 200 ಅಪ್ರೆಂಟಿಸ್ (MESCOM Apprentice) ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಡಿಪ್ಲೋಮಾ, ಸಾಮಾನ್ಯ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ.
MESCOM Apprentice Recruitment 2026
ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಜೊತೆಗೆ ಒಂದು ವರ್ಷಗಳ ವೃತ್ತಿ ಅನುಭವ ಪಡೆದುಕೊಳ್ಳಲು ಬಯಸುವವರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮೆಸ್ಕಾಂನ ಅಪ್ರೆಂಟಿಸ್ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿ ಬೇಕಿದ್ದರೆ, ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಉದ್ಯೋಗಸಲಹೆ ಗೆ ಭೇಟಿ ನೀಡಿ.
ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆಯ ಹೆಸರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (MESCOM) ಹುದ್ದೆಯ ಹೆಸರು: ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್, ಗ್ರಾಜುಯೇಟ್ ಅಪ್ರೆಂಟಿಸ್ ಹಾಗೂ ಸಾಮಾನ್ಯ ಪದವೀಧರ ಅಪ್ರೆಂಟಿಸ್ ಹುದ್ದೆಗಳ ಸಂಖ್ಯೆ: 200 ಹುದ್ದೆಗಳು ಉದ್ಯೋಗ ಸ್ಥಳ: ಮಂಗಳೂರು ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 02-03-2026 |

ಹುದ್ದೆಯ ವಿಶ್ಲೇಷಣೆ:
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (MESCOM) ವತಿಯಿಂದ ಒಟ್ಟು 200 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಒಟ್ಟು 200 ಹುದ್ದೆಗಳನ್ನು ಕೆಲವು ವಿಭಾಗಗಳಾಗಿ ವಿಂಗಡಿಸಲಾಗಿದೆ. ಅವುಗಳೆಂದರೆ, ಪದವೀಧರ ಅಪ್ರೆಂಟಿಸ್, ತಾಂತ್ರಿಕ ಡಿಪ್ಲೋಮಾಧರ ಅಪ್ರೆಂಟಿಸ್, ಸಾಮಾನ್ಯ ಪದವೀಧರ ಅಪ್ರೆಂಟಿಸ್.(MESCOM Apprentice) ಈ ಮೂರು ವಿಭಾಗಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಎನ್ನುವುದನ್ನು ಕೆಳಗಿನ ಹಂತದಲ್ಲಿ ನೋಡೋಣ.
ಹುದ್ದೆಯ ಸಂಕ್ಷಿಪ್ತ ವಿವರ:
| ಹುದ್ದೆಯ ಹೆಸರು | ಒಟ್ಟು ಹುದ್ದೆಗಳು |
| ಸಾಮಾನ್ಯ ಪದವೀಧರ ಅಪ್ರೆಂಟಿಸ್ | 65 |
| ತಾಂತ್ರಿಕ ಡಿಪ್ಲೋಮಾಧರ ಅಪ್ರೆಂಟಿಸ್ | 65 |
| ಪದವೀಧರ ಅಪ್ರೆಂಟಿಸ್ | 70 |
ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳೇನು?
- ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ಸಾಮಾನ್ಯ ಪದವೀಧರ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ ಪದವಿಯನ್ನು ಹೊಂದಿರಬೇಕು.
- ತಾಂತ್ರಿಕ ಡಿಪ್ಲೋಮಾಧರ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ತಂತ್ರಜ್ಞಾನ ಅಥವಾ ಇಂಜಿನಿಯರ್ ನಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
- ಪದವೀಧರ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ತಂತ್ರಜ್ಞಾನ ಅಥವಾ ಇಂಜಿನಿಯರಿಂಗ್ ನಲ್ಲಿ ಬಿ.ಇ, ಬಿ.ಟೆಕ್ ಪದವಿಯನ್ನು ಹೊಂದಿರಬೇಕು.
| ಇಲ್ಲಿ ಗಮನಿಸಿ: “ಅಭ್ಯರ್ಥಿಗಳು ಈ ಎಲ್ಲಾ ಪದವಿಯನ್ನು 2021, 2022, 2023, 2024 ಅಥವಾ 2025ನೇ ಸಾಲಿನಲ್ಲಿ ಪೂರ್ಣಗೊಳಿಸಿರಬೇಕು.” |
ವಯೋಮಿತಿ ವಿವರ:
ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 1973 ರ ಅಪ್ರೆಂಟಿಸ್ ಶಿಪ್ ಕಾಯ್ದೆಯನ್ವಯ ನಿಗದಿಪಡಿಸಲಾಗುತ್ತದೆ.
ವಯೋಮಿತಿ ಸಡಿಲಿಕೆ:
1973 ರ ಅಪ್ರೆಂಟಿಸ್ ಶಿಪ್ ಕಾಯ್ದೆಯನ್ವಯ ST/SC, ಇತರೆ ಹಿಂದುಳಿದ ವರ್ಗಗಳು (ಒಬಿಸಿ), PwBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡದೆ, ಉಚಿತವಾಗಿ ನ್ಯಾಷನಲ್ (MESCOM Apprentice)ಅಪ್ರೆಂಟಿಸ್ ಶಿಪ್ ಟ್ರೈನಿಂಗ್ ಸ್ಕೀಮ್ (NATS) ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆ ಪ್ರಕ್ರಿಯೆ:
- ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಪದವಿ ಅಥವಾ ಡಿಪ್ಲೋಮಾದಲ್ಲಿ ಗಳಿಸಿದ ಒಟ್ಟು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.
- ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಮೇಲ್ ಮೂಲಕ ಮಾಹಿತಿಯನ್ನು ನೀಡಲಾಗುವುದು.
- ನಂತರ ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು ಮೆಸ್ಕಾಂ ಕೇಂದ್ರ ಕಚೇರಿಗೆ ಭೇಟಿ ನೀಡಿ ತಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಿಸಬೇಕಾಗುತ್ತದೆ.
- ದಾಖಲಾತಿ ಪರಿಶೀಲನೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳಿಗೆ ಮೆಸ್ಕಾಂನಲ್ಲಿ ತರಬೇತಿ ಪಡೆಯಲು ಆದೇಶ ಪಾತ್ರವನ್ನು ನೀಡಲಾಗುವುದು.
ವೇತನ ಶ್ರೇಣಿ:
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (MESCOM Apprentice)ನಿಯಮಿತಿಯ ಅಪ್ರೆಂಟಿಸ್ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಪಂಡ್ ರೂಪದಲ್ಲಿ ವೇತನವನ್ನು ನೀಡಲಾಗುವುದು. ಅವುಗಳ ವಿವರ ಈ ಕೆಳಕಂಡಂತಿದೆ,
ತಾಂತ್ರಿಕ ಡಿಪ್ಲೋಮಾಧರ ಅಪ್ರೆಂಟಿಸ್ – ₹8,000
ಸಾಮಾನ್ಯ ಪದವೀಧರ ಅಪ್ರೆಂಟಿಸ್ – ₹9,000
ಪದವೀಧರ ಅಪ್ರೆಂಟಿಸ್ – ₹9,000
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಈ ಕೆಳಗಿನ ಹಂತವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಹಂತ 1 : NATS ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳುವುದು:
- ಅಭ್ಯರ್ಥಿಗಳು ಮೊದಲು ನ್ಯಾಷನಲ್ ಅಪ್ರೆಂಟಿಸ್ ಶಿಪ್ ಟ್ರೈನಿಂಗ್ ಸ್ಕೀಮ್ (NATS) ಅಧಿಕೃತ ಪೋರ್ಟಲ್ https://nats.education.gov.in/ ಗೆ ಭೇಟಿ ನೀಡಿ.
- ನಂತರ ಸ್ಟೂಡೆಂಟ್ ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ
- ಇಮೇಲ್ ಹಾಗೂ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ.
ಹಂತ 2: ವಿವರಗಳನ್ನು ಭರ್ತಿ ಮಾಡುವುದು:
- ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಅಭ್ಯರ್ಥಿಗಳಿಗೆ ಸಿಗುವ 12 ಅಂಕಿಗಳ ಸಂಖ್ಯೆಗಳನ್ನು ನಮೂದಿಸಿ ಲಾಗಿನ್ ಆಗಿ.
- ‘Apply against advertised vacancies’ ವಿಭಾಗವನ್ನು ಆಯ್ಕೆ ಮಾಡಿ
- ನಂತರ ಸರ್ಚ್ ಬಾಕ್ಸ್ ನಲ್ಲಿ ಇರುವ ‘ಮಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್’ ಎಂದು ಟೈಪ್ ಮಾಡಿ
- ನಂತರ ಮೆಸ್ಕಾಂ (MESCOM Apprentice)ಹೆಸರು ಕಾಣಿಸಿಕೊಂಡಾಗ, ಅದರ ಮುಂದೆ ಇರುವ ಅಪ್ಲೈ ಬಟನ್ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.
ವಿಶೇಷ ಸೂಚನೆ:
- ಈ ಹುದ್ದೆಗೆ ಯಾವುದೇ ರೀತಿಯ ಲಿಖಿತ ಹಾಗೂ ಮೌಖಿಕ ಪರೀಕ್ಷೆಗಳಿರುವುದಿಲ್ಲ.
- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಹಿಂದೆ ಯಾವುದೇ ರೀತಿಯ ಅಪ್ರೆಂಟಿಸ್ ಶಿಪ್ ತರಬೇತಿಯನ್ನು ಪಡೆದುಕೊಂಡಿರಬಾರದು ಹಾಗೂ
- ಯಾವುದೇ ಹುದ್ದೆಯಲ್ಲಿ ಒಂದು ವರ್ಷಕ್ಕಿಂತ ಹೆಚ್ಚಿನ ವೃತ್ತಿ ಅನುಭವ ಹೊಂದಿರಬಾರದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 31-01-2026 |
| ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲು ಕೊನೆಯ ದಿನಾಂಕ | 24-02-2026 |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 02-03-2026 |
ಹುದ್ದೆಗೆ ಸಂಭಂದಿಸಿದ ಪ್ರಮುಖ ಲಿಂಕುಗಳು:
ಅಧಿಕೃತ ವೆಬ್ಸೈಟ್ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ
ಅಂತಿಮ ನುಡಿ:
ಮೆಸ್ಕಾಂ ಪ್ರತಿ ವರ್ಷದಂತೆ ಈ ವರ್ಷವೂ ಒಟ್ಟು 200 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವ ಮೂಲಕ ನಿರುದ್ಯೋಗಿಗಳಿಗೆ ವೃತ್ತಿಪರ ಅನುಭವವನ್ನು ಪಡೆಯುವಂತೆ ಮಾಡಿದೆ. ಈ ಹುದ್ದೆಯು ಸರ್ಕಾರದ ಖಾಯಂ ಹುದ್ದೆಯಲ್ಲ ಬದಲಿಗೆ ಒಂದು ವರ್ಷದ ತರಬೇತಿ ಅವಧಿಗೆ ಮಾತ್ರ ಸೀಮಿತವಾಗಿರುತ್ತದೆ.
ಈಗಷ್ಟೇ ಪದವಿ ಹಾಗೂ ಡಿಪ್ಲೋಮಾ ಪೂರ್ಣ ಗೊಳಿಸಿರುವ ಅಭ್ಯರ್ಥಿಗಳಿಗೆ ವೃತ್ತಿ ಅನುಭವ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶ. ಆಸಕ್ತ ಅಭ್ಯರ್ಥಿಗಳು ಮೇಲೆ ನೀಡಿರುವ ಹಂತವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.







