ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಇಲ್ಲಿದೆ ಸಿಹಿಸುದ್ದಿ. ಶಿವಮೊಗ್ಗ ಜಿಲ್ಲಾ ಪಂಚಾಯತಿಯು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಾಡಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 01-01-2026 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
Shimoga Zilla Panchayat Recruitment
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಯಲ್ಲಿ ಸಂಪೂರ್ಣ ಮಾಹಿತಿಯನ್ನು ನೋಡಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 17-12-2025 ರಿಂದ 01-01-2026 ರ ವರೆಗೂ ಅವಕಾಶವಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಹತಾ ಮಾನದಂಡ ಪ್ರಮುಖ ದಾಖಲೆಗಳು ಹಾಗೂ ಇನ್ನಿತರೆ ಮಾಹಿತಿಗಳ ಬಗ್ಗೆ ಸಂಪೂರ್ಣವಾಗಿ ಕೆಳಗೆ ನೀಡಿರುತ್ತೇವೆ ಅದನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳ ಅವಲೋಕನ: (Shimoga Zilla Panchayat Recruitment
)
| ಸಂಸ್ಥೆಯ ಹೆಸರು | ಬಿ.ಕೆ.ಆರ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ |
| ಹುದ್ದೆಯ ಹೆಸರು | ಅಕೌಂಟ್ಸ್ ಮ್ಯಾನೇಜರ್ |
| ಉದ್ಯೋಗ ಸ್ಥಳ | ಶಿವಮೊಗ್ಗ ಜಿಲ್ಲೆ |
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 17-12-2025 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 01-01-2026 |
ಸಂಕ್ಷಿಪ್ತ ಮಾಹಿತಿ:
ಶಿವಮೊಗ್ಗ ಜಿಲ್ಲಾ ಪಂಚಾಯತಿಯು ಅಕೌಂಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಬಿ.ಕೆ.ಆರ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನಡೆಸಲಾಗುವುದು. ಎಂಬಿಎ ಅಥವಾ ಎಂಕಾಂ ಪದವಿಯನ್ನು ಪೂರ್ಣಗೊಳಿಸಿರುವ 21 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಹರಾಗಿರುತ್ತಾರೆ.

ಹುದ್ದೆಗಳ ವಿವರ:
ಅಕೌಂಟ್ಸ್ ಮ್ಯಾನೇಜರ್ ಆಗಿ ಆಯ್ಕೆಗೊಂಡ ಅಭ್ಯರ್ಥಿಯು ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಹಣಕಾಸು ಮತ್ತು ಲೆಕ್ಕಪತ್ರ ನಿರ್ವಹಣೆಯನ್ನು ಮಾಡಬೇಕು
ಶೈಕ್ಷಣಿಕ ಅರ್ಹತೆ:
- ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಲ್ಲಿ ಎಂಕಾಂ ಅಥವಾ ಎಂಬಿಎ ಪದವಿಯನ್ನು ಪೂರ್ಣಗೊಳಿಸಿರಬೇಕು.
- ಅಭ್ಯರ್ಥಿಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಟೈಪಿಂಗ್ ಮಾಡುವ ಉತ್ತಮ ಪರಿಣಿತಿ ಹೊಂದಿರಬೇಕು.
- ಅಭ್ಯರ್ಥಿಯು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ವೃತ್ತಿ ಅನುಭವವನ್ನು ಹೊಂದಿರಬೇಕು.
- ಕಂಪ್ಯೂಟರ್ ಬಳಕೆಯ ಕುರಿತು ಸಮರ್ಪಕ ಜ್ಞಾನ ಮತ್ತು ಲೆಕ್ಕಪತ್ರ ನಿರ್ವಹಣಾ ಸಾಫ್ಟ್ ವೇರ್ ಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು.
ವಯೋಮಿತಿ:
- ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 35 ವರ್ಷಗಳ ಒಳಗೆ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- ಸರ್ಕಾರದ ನಿಯಮದ ಪ್ರಕಾರ ಕೆಲವು ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
- ಅಧಿಕೃತ ಅಧಿಸೂಚನೆಯಲ್ಲಿ ಅರ್ಜಿ ಶುಲ್ಕದ ಬಗ್ಗೆ ಉಲ್ಲೇಖಿಸಿಲ್ಲ.
ವೇತನ ಶ್ರೇಣಿ:
- ಆಯ್ಕೆಗೊಂಡ ಅಭ್ಯರ್ಥಿಗೆ ಸರ್ಕಾರದ ಮಾನದಂಡದ ಜೊತೆಗೆ ಬಿ.ಕೆ.ಆರ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಿಯಮಕ್ಕೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
ಅಗತ್ಯ ದಾಖಲೆಗಳು:
- ಪದವಿ ಪ್ರಮಾಣಪತ್ರ
- ಅಂಕಪಟ್ಟಿ
- ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ಓಟರ್ ಐಡಿ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
ಅರ್ಜಿ ಸಲ್ಲಿಸುವ ವಿಧಾನ:
- ಅಧಿಕೃತ ವೆಬ್ ಸೈಟ್ ಗೆ ಭೇಟಿನೀಡಿ
- ಅಕೌಂಟ್ಸ್ ಮ್ಯಾನೇಜರ್ ನೇಮಕಾತಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿಕೊಳ್ಳಿ
- ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿಮಾಡಿರುವ ಬಗ್ಗೆ ಖಚಿತಪಡಿಸಿಕೊಳ್ಳಿ
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ 01-01-2026 ರೊಳಗೆ ಅರ್ಜಿಯನ್ನು ಸಲ್ಲಿಸಿ.
ಪ್ರಮುಖ ದಿನಾಂಕಗಳು:
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17-12-2025
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-01-2026
ಆಯ್ಕೆ ಪ್ರಕ್ರಿಯೆ:
- ಶೈಕ್ಷಣಿಕ ಅರ್ಹತೆ ಮತ್ತು ಪಡೆದ ಅಂಕಗಳ ಆಧಾರದ ಮೇಲೆ
- ಸಂಬಂಧಿತ ಕ್ಷೇತ್ರದ ಅನುಭವದ ಆಧಾರದ ಮೇಲೆ
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ವ್ಯೆಯಕ್ತಿಕ ಸಂದರ್ಶನ
ಪ್ರಮುಖ ಲಿಂಕ್ ಗಳು:
| ಅಧಿಸೂಚನೆಯ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ತೀರ್ಮಾನ:
ಶಿವಮೊಗ್ಗ ಜಿಲ್ಲಾ ಪಂಚಾಯತಿಯು ಅಕೌಂಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಹತಾ ಮಾನದಂಡವನ್ನು ಪೂರೈಸುತ್ತಾರೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ದಿನಾಂಕ 01-01-2026 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.





