Village Administrative Officer Recruitment 2026 : ಸರ್ಕಾರಿ ಹುದ್ದೆಗಳನ್ನು ಪಡೆದುಕೊಂಡು ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ಆ ಕನಸನ್ನು ನನಸು ಮಾಡಿಕೊಳ್ಳಲು ಇಲ್ಲಿದೆ ಅತ್ಯುತ್ತಮ ಅವಕಾಶ. ಕರ್ನಾಟಕ ಸರ್ಕಾರವು ಹೊಸ ವರ್ಷದ ಆರಂಭದಲ್ಲಿಯೇ ಸರ್ಕಾರಿ ಕೆಲಸವನ್ನು ಪಡೆಯಬೇಕೆಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ನೀವು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾ? ಹಾಗಿದ್ದರೆ ಈ ಕೆಳಗೆ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಕಂದಾಯ ಇಲಾಖೆಯಲ್ಲಿ 500 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ 2026
ಕರ್ನಾಟಕ ಸರ್ಕಾರವು ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 500 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಇನ್ನಷ್ಟೇ ಅಧಿಸೂಚನೆಯನ್ನು ಹೊರಡಿಸಲಿದ್ದು, ನೇರ ನೇಮಕಾತಿ ಪ್ರಕ್ರಿಯೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಯ ಬಗೆಗಿನ ಇನ್ನಷ್ಟು ಮಾಹಿತಿಗಾಗಿ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಗೆ ಭೇಟಿ ನೀಡಿ.
ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಹೇಗೆ ಅರ್ಜಿ ಸಲ್ಲಿಸಬೇಕು? ಏನೆಲ್ಲಾ ಅಗತ್ಯ ದಾಖಲೆಗಳಿರಬೇಕು? ವಿದ್ಯಾರ್ಹತೆ ಏನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾ? ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾ ? ಎನ್ನುವ ಗೊಂದಲಗಳು ಉಂಟಾಗುವುದು ಸಹಜ. ಈ ಎಲ್ಲ ಗೊಂದಲಗಳಿಗೂ ಪರಿಹಾರವನ್ನು ಈ ಒಂದು ಲೇಖನದಲ್ಲಿ ಕಂಡುಕೊಳ್ಳಬಹುದು.
ಹುದ್ದೆಯ ವಿಮರ್ಶೆ:
| ಹುದ್ದೆಯ ಹೆಸರು | ಗ್ರಾಮ ಆಡಳಿತ ಅಧಿಕಾರಿ |
| ಇಲಾಖೆ | ಕಂದಾಯ ಇಲಾಖೆ |
| ಒಟ್ಟು ಹುದ್ದೆಗಳ ಸಂಖ್ಯೆ | 500 ಹುದ್ದೆಗಳು |
| ನೇಮಕಾತಿ ಪ್ರಕ್ರಿಯೆ ನಡೆಯುವ ರೀತಿ | ನೇರ ನೇಮಕಾತಿ |
ಹುದ್ದೆಯ ಕುರಿತು ಇನ್ನಷ್ಟು ಮಾಹಿತಿ:
ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಒಟ್ಟು 500 ಹುದ್ದೆಗಳು ನೇಮಕಾತಿಗೆ ಒಪ್ಪಿಗೆ ಸೂಚಿಸಿದೆ. ಜನವರಿ 7 ರ ಒಳಗಾಗಿ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಯಲ್ಲಿರುವ ಖಾಲಿ ಹುದ್ದೆಗಳ ಬಗ್ಗೆ ವರದಿಯನ್ನು ನೀಡಬೇಕೆಂದು ಸೂಚಿಸಿದೆ. ಎಲ್ಲ ಜಿಲ್ಲೆಗಳ ಖಾಲಿ ಹುದ್ದೆಗಳ ವರದಿ ಸಿಕ್ಕ ತಕ್ಷಣವೇ ಈ ಒಂದು ನೇಮಕಾತಿ ಪ್ರಕ್ರಿಯೆ ಅಧಿಕೃತ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.

ಹುದ್ದೆಗೆ ಅರ್ಜಿ ಸಲ್ಲಿಸುವವರು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳೇನು?
ಅಧಿಕೃತ ಅಧಿಸೂಚನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದು, ಸಾಮಾನ್ಯವಾಗಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕು.
- ಮೊದಲು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿಯುಸಿ ಯನ್ನು ಪೂರ್ಣಗೊಳಿಸಬೇಕಿತ್ತು ಆದರೆ ಇತ್ತೀಚಿನ ವರದಿಯ ಪ್ರಕಾರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗಿದೆ.
ವಯೋಮಿತಿ:
- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವಾರು ವಯೋಮಿತಿ ಸಡಿಲಿಕೆ ಇರುತ್ತದೆ. ಯಾವ ವರ್ಗಗಳಿಗೆ ಎಷ್ಟೆಷ್ಟು ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ ಎನ್ನುವ ಬಗ್ಗೆ ಅಧಿಸೂಚನೆ ಹೊರಡಿಸಿದ ನಂತರವೇ ಸ್ಪಷ್ಟನೆ ದೊರೆಯಲಿದೆ.
ಅರ್ಜಿ ಶುಲ್ಕ:
- ಅಧಿಸೂಚನೆ ಹೊರಡಿಸಿದ ನಂತರವೇ ಅರ್ಜಿ ಶುಲ್ಕದ ಬಗ್ಗೆ ಮಾಹಿತಿ ಲಭ್ಯವಾಗುತ್ತದೆ.
ಅಗತ್ಯ ದಾಖಲೆಗಳು:
ಸಾಮಾನ್ಯ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ದಾಖಲೆಗಳನ್ನು ಹೊಂದಿರುವುದು ಅಗತ್ಯ.
- ಶೈಕ್ಷಣಿಕ ಪ್ರಮಾಣಪತ್ರ
- ಅಂಕಪಟ್ಟಿ
- ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ಓಟರ್ ಐಡಿ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿಲ್ಲ. ಆದರೆ ಜಿಲ್ಲಾವಾರು ಎಷ್ಟು ಹುದ್ದೆಗಳು ಖಾಲಿ ಎನ್ನುವ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳುತ್ತಿದೆ. ಹಾಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಧಿಕೃತ ಲಿಂಕನ್ನು ಇನ್ನು ಬಿಡುಗಡೆ ಮಾಡಿಲ್ಲ.
ಆಯ್ಕೆ ಪ್ರಕ್ರಿಯೆ:
- ನೇರ ನೇಮಕಾತಿ
- ಸ್ಪರ್ಧಾತ್ಮಕ ಪರೀಕ್ಷೆ
ಮೂಲ ನಿಯಮಗಳ ಪ್ರಕಾರ, ನೇಮಕಾತಿ ಪ್ರಕ್ರಿಯೆಯನ್ನು ಈ ಎರಡು ಹಂತಗಳನ್ನು ಒಳಗೊಂಡಿದೆ.
ತೀರ್ಮಾನ:
ಕರ್ನಾಟಕ ಸರ್ಕಾರವು ಕಂದಾಯ ಇಲಾಖೆಯಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಒಪ್ಪಿಗೆಯನ್ನು ಸೂಚಿಸಿದ್ದು, ಸದ್ಯಕ್ಕೆ ಜಿಲ್ಲಾವಾರು ಖಾಲಿ ಹುದ್ದೆಗಳ ಬಗ್ಗೆ ಜಿಲ್ಲಾ ಅಧಿಕಾರಿಗಳ ಬಳಿ ಮಾಹಿತಿಯನ್ನು ಸಂಗ್ರಹಿಸುತ್ತಿದ್ದು, ಸದ್ಯದಲ್ಲೇ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ.






